Bigg Boss: ಬಿಗ್ ಬಾಸ್ ರಿಯಾಲಿಟಿ ಶೋ ಪುನಾರಂಭಕ್ಕೆ ಡಿ.ಕೆ. ಶಿವಕುಮಾರ್ ಗ್ರೀನ್ ಸಿಗ್ನಲ್!
ಕನ್ನಡ ‘ಬಿಗ್ ಬಾಸ್ ಸೀಸನ್ 12’ ಶೋ ನಡೆಯುತ್ತಿದ್ದ ಸ್ಟುಡಿಯೋವನ್ನು ನಿಯಮ ಉಲ್ಲಂಘನೆ ಆರೋಪದ ಮೇಲೆ ಸರ್ಕಾರ ಮುಚ್ಚಿತ್ತು. ಆದರೆ, ಈಗ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಾಲಿವುಡ್ ಸ್ಟುಡಿಯೋಸ್‌ಗೆ ತಪ್ಪು ಸರಿಪಡಿಸಿಕೊಳ್ಳಲು ಮತ್ತೊಂದು ಅವಕಾಶ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ಮಾಲಿನ್ಯ ನಿಯಂತ್ರಣ ಮಂಡಲಿ ಈ ಕ್ರಮ ಕೈಗೊಂಡಿದ್ದಾರೆ. ನಾನು ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಅವರೇ ಸರಿ ಮಾಡಿಕೊಳ್ಳಲಿ, ನಮಗೆ ಎಂಟರ್ ಟೈನ್‌ಮೆಂಟ್ ಬೇಕು. ಮೊದಲು ನಾನೇ ಉದ್ಘಾಟನೆ ಕೂಡ ಮಾಡಿರೋದು. ಜನರಿಗೆ ಮನರಂಜನೆ ನೀಡಲು ಕೋಟ್ಯಂತರ ರೂಪಾಯಿ ಖರ್ಚು ಮಾಡಿರುತ್ತಾರೆ. ಏನೇ ತಪ್ಪಾಗಿದ್ದರೂ ಸರಿ ಮಾಡಿಕೊಳ್ಳಲು ಅವಕಾಶ ಕೊಡಬೇಕು. ಇದು ನನ್ನ ಸಲಹೆ’ ಎಂದು ಹೇಳಿದರು.