Murder Case: ಗಂಗಾವತಿಯಲ್ಲಿ ಭೀಕರ ಮರ್ಡರ್​: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಲೆ

ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಗಂಗಾವತಿ ನಗರದಲ್ಲಿ ನಡೆದಿದೆ.

ವೆಂಕಟೇಶ ಕುರುಬರ (31) ಹತ್ಯೆಯಾದ ಯುವಕ. ಕೊಪ್ಪಳ ರಸ್ತೆಯ ಖಾಸಗಿ ಆಸ್ಪತ್ರೆಯ ಮುಂಭಾಗದಲ್ಲಿ ಮದ್ಯರಾತ್ರಿ 2 ಗಂಟೆ ಸುಮಾರಿಗೆ ಈ ಹತ್ಯೆ ನಡೆದಿದೆ. ವೆಂಕಟೇಶ್ ಕೊಪ್ಪಳದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿದ್ದರು. ವೈಯಕ್ತಿಕ ದ್ವೇಷದಿಂದ ಘಟನೆ ನಡೆದಿದೆ ಎಂದು ಶಂಕಿಸಲಾಗಿದೆ.

ಸ್ನೇಹಿತರೊಟ್ಟಿಗೆ ಊಟ ಮಾಡಿ ದೇವಿಕ್ಯಾಂಪ್​ನಿಂದ ಗಂಗಾವತಿ ಕಡೆಗೆ ವೆಂಕಟೇಶ್ ಬೈಕ್​ನಲ್ಲಿ ಬರುತ್ತಿದ್ದರು. ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದ ಗ್ಯಾಂಗ್‌ ಬೈಕ್‌ಗೆ ಗುದ್ದಿ ಅಡ್ಡಗಟ್ಟಿ ಲಾಂಗ್ ಮತ್ತು ಮಚ್ಚುಗಳಿಂದ ವೆಂಕಟೇಶನನ್ನು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದೆ. ಘಟನೆಯ ಸ್ಥಳಕ್ಕೆ ಡಿವೈಎಸ್‌ಪಿ ಸಿದ್ದನಗೌಡ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

Rakesh arundi

Leave a Reply

Your email address will not be published. Required fields are marked *