Bengaluru: ಬೆಂಗಳೂರಲ್ಲಿ ತಿಗಣೆ ಔಷಧಿ ವಾಸನೆಗೆ ಬಿಟೆಕ್ ವಿದ್ಯಾರ್ಥಿ ಸಾವು
ತಿಗಣೆ ಔಷಧಿ ವಾಸನೆಗೆ ಬಿಟೆಕ್ ವಿದ್ಯಾರ್ಥಿಯೊಬ್ಬ ಪಿಜಿ ರೂಮಿನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೆಚ್‌ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತನನ್ನು ತಿರುಪತಿ ಮೂಲದ ಪವನ್ ಎಂದು ಗುರುತಿಸಲಾಗಿದೆ. ಹೆಚ್‌ಎಎಲ್ ಬಳಿ ಪಿಜಿಯಲ್ಲಿ ವಾಸವಾಗಿದ್ದ ಪವನ್ ಬಿಟೆಕ್ ಪದವಿ ವ್ಯಾಸಂಗ ಮಾಡುತ್ತಿದ್ದರು. ನಿನ್ನೆ ಪಿಜಿಯಲ್ಲಿ ಸಿಬ್ಬಂದಿಗಳು ತಿಗಣೆ ಔಷಧ ಸಿಂಪಡಿಸಿದ್ದರು. ಈ ಬಗ್ಗೆ ಮಾಹಿತಿ ಇಲ್ಲದೇ ಪವನ್ ರೂಮ್‌ಗೆ ಪ್ರವೇಶಿಸಿ ಮಲಗಿದ್ದ. ತಿಗಣೆ ಔಷಧದ ವಿಷಕಾರಿ ವಾಸನೆಯನ್ನು ಉಸಿರಾಡಿದ ಕಾರಣದಿಂದ ಪವನ್ ಅಸ್ವಸ್ಥನಾಗಿ ಕುಸಿದುಬಿದ್ದು, ಮೃತಪಟ್ಟಿರುವುದಾಗಿ ಶಂಕಿಸಲಾಗಿದೆ.
ಸದ್ಯ ಮರಣೋತ್ತರ ಪರೀಕ್ಷೆಗಾಗಿ ಮೃತದೇಹ ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ. ಹೆಚ್ಎಎಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.