Accident: ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ : ಬೀದರ್ ಮೂಲದ ನಾಲ್ವರು ಸ್ಥಳದಲ್ಲೇ ಸಾವು
ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ಬೀದರ್ ಮೂಲದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಉಮ್ಮರ್ಗಾ ಸಮೀಪ ಮಂಗಳವಾರ ಬೆಳಿಗ್ಗೆ ನಡೆದಿದೆ.
ಶಿವಕುಮಾರ್, ರತಿಕಾಂತ, ಇನ್ನಿಬ್ಬರ ಹೆಸರು ತಿಳಿದುಬಂದಿಲ್ಲ. ಮೃತರು ಬೀದರ್ ತಾಲೂಕಿನ ಖಾಶೆಂಪೂರ್ ಗ್ರಾಮದ ನಿವಾಸಿಗಳು. ಓರ್ವನಿಗೆ ಗಂಭೀರ ಗಾಯವಾಗಿದ್ದು, ಉಮ್ಮರ್ಗಾ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದೀಪಾವಳಿ ಹಬ್ಬ ಹಿನ್ನೆಲೆ ಹುಲಜಂತಿ ಮಾಳಿಂಗರಾಯ ಸ್ವಾಮೀಜಿ ದರ್ಶನಕ್ಕೆ ತೆರಳಿದ್ದರು. ದರ್ಶನ ಮುಗಿಸಿ ಹಿಂದಿರುಗುವಾಗ ಮಹಾರಾಷ್ಟ್ರದ ಉಮ್ಮರ್ಗಾ ಬಳಿ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ನಾಲ್ವರಲ್ಲಿ ಮೂರು ಒಂದೇ ಕುಟುಂಬಕ್ಕೆ ಸೇರಿದವರು ಎನ್ನಲಾಗಿದೆ.