Tiger Kill: ಮಲೆಮಹದೇಶ್ವರ ಬೆಟ್ಟದಲ್ಲಿ ಹುಲಿ ಹತ್ಯೆ; ಇಬ್ಬರು ಶಂಕಿತರು ವಶಕ್ಕೆ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಧಾಮದಲ್ಲಿ ವಿಷಪ್ರಾಶನ ಮಾಡಿ 5 ಹುಲಿಗಳ ಹತ್ಯೆ ಪ್ರಕರಣ ಮಾಸುವ ಮುನ್ನವೇ ಎರಡು ದಿನಗಳ ಹಿಂದೆ ಜಿಲ್ಲೆಯಲ್ಲಿ ಮತ್ತೊಂದು ಹುಲಿಯನ್ನು ವಿಷಪ್ರಾಶನ ಮಾಡಿ ಹತ್ಯೆ ಮಾಡಲಾಗಿದೆ. ಪ್ರಕರಣ ಸಂಬಂಧ ಶಂಕಿತರನ್ನು ಶನಿವಾರ ವಶಕ್ಕೆ ಪಡೆಯಲಾಗಿದೆ.

ಪಚ್ಚೆದೊಡ್ಡಿತಾಂಡಾ ನಿವಾಸಿಗಳಾದ ಪಚ್ಚೆಮಲ್ಲು ಮತ್ತು ಮಂಜುನಾಥ ಎಂಬುವವರನ್ನು ಜಿಲ್ಲೆಯ ಹನೂರು ವಲಯ ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ಹುಲಿಗೆ ವಿಷಪ್ರಾಶನ ಮಾಡಿ ಕೊಂದಿರುವುದಾಗಿ ತಿಳಿದುಬಂದಿದೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅರಣ್ಯ ಸಚಿವ ಈಶ್ವರ ಖಂಡ್ರೆ, ಮಲೆಮಹದೇಶ್ವರ ವನ್ಯಜೀವಿಧಾಮದ ಹನೂರು ವಲಯ ವ್ಯಾಪ್ತಿಯಲ್ಲಿ ನಡೆದಿರುವ ಮತ್ತೊಂದು ಹುಲಿ ಹತ್ಯೆಯಿಂದ ತುಂಬಾ ನೋವಾಗಿದೆ ಎಂದಿದ್ದಾರೆ. ಹುಲಿ ಹತ್ಯೆ ಪ್ರಕರಣದ ತನಿಖೆಗೆ ವಿಶೇಷ ತಂಡ ರಚಿಸಲಾಗಿದೆ. ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಹುಲಿಗೆ ವಿಷಪ್ರಾಶನ ಮಾಡಲಾಗಿದೆ ಅನ್ನುವ ಮಾಹಿತಿ ಇದೆ. ವನ್ಯಜೀವಿ ಅಪರಾಧ ಕಾಯ್ದೆ ಅನ್ವಯ ಕೇಸ್ ದಾಖಲಿಸಲಾಗಿದೆ. ಹುಲಿಯನ್ನು ಕೊಂದು 3 ತುಂಡು ಮಾಡಿರುವುದು ಘೋರಕೃತ್ಯ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಸದ್ಯ ವಶಕ್ಕೆ ಪಡೆದಿರುವ ಶಂಕಿತ ಇಬ್ಬರು ಆರೋಪಿಗಳನ್ನು ಅರಣ್ಯಾಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಕೃತ್ಯದಲ್ಲಿ ಯಾರೆಲ್ಲಾ ಸಾಥ್​ ನೀಡಿದ್ದಾರೆ, ಹುಲಿಯನ್ನು ಕೊಂದಿದ್ದು ಹೇಗೆ ಎಂಬುದರ ಕುರಿತು ವಿಚಾರಣೆ ಮಾಡಲಾಗುತ್ತಿದೆ.

12 ವರ್ಷ ವಯಸ್ಸಿನ ಹುಲಿಯ ಹಲ್ಲು ಹಾಗೂ ಉಗುರುಗಳನ್ನು ಕಿತ್ತಿರಲಿಲ್ಲ. ಹುಲಿಯನ್ನು ಮೂರು ತುಂಡುಗಳಾಗಿ‌ ಮಾಡಿ ಭೀಕರವಾಗಿ ಕೊಲ್ಲಲಾಗಿದೆ. ಹುಲಿ ಹತ್ಯೆ ಮಾಹಿತಿ ತಿಳಿದ ಕೂಡಲೇ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ತನಿಖೆ ನಡೆಸಲು ಪಿಸಿಸಿಎಫ್ ಸ್ಮಿತಾ ಬಿಜ್ಜೂರು ನೇತೃತ್ವದಲ್ಲಿ ತನಿಖಾ ತಂಡ ರಚಿಸಿದ್ದು, ಎಂಟು ದಿನಗಳಲ್ಲಿ ತನಿಖಾ ವರದಿ ಸಲ್ಲಿಸಲು ಸೂಚಿಸಿದ್ದಾರೆ.

—case-two–taken-into-

Rakesh arundi

Leave a Reply

Your email address will not be published. Required fields are marked *