Bengaluru: ತುಂಡಾಗಿ ಬಿದ್ದ ಕ್ರೇನ್​: ಐವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

ಕ್ರೇನ್ ತುಂಡಾಗಿ ಬಿದ್ದ ಪರಿಣಾಮ ಐವರು ಗಾಯಗೊಂಡು, ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಬೆಂಗಳೂರಿನ ಕೆ.ಆರ್. ಪುರಂನಲ್ಲಿ ನಡೆದಿದೆ. ಗಾಯಾಳುಗಳನ್ನು ಭಟ್ಟರಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.

ಗಾಯಾಳುಗಳನ್ನು ಲಾಲು (30), ಕುರ್ಬನ್ (19), ಇಲಿಯಾಜ್ (38), ಸಮೀಮ್ (28) ಮತ್ತು ಶಾಮದೇವ್ (52) ಎಂದು ಗುರುತಿಸಲಾಗಿದೆ. ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಕ್ರೇನ್ ಬಳಸುತ್ತಿದ್ದ ವೇಳೆ ತುಂಡಾಗಿ ಬಿದ್ದಿದೆ. ಅಪಘಾತದ ಸಮಯದಲ್ಲಿ ಸಮೀಪದ ಮನೆಯ ಮೇಲೆ ಬಿದಿದ್ದು, ವಾಸವಿದ್ದ ಐದು ಮಂದಿ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಾಯಾಳುಗಳನ್ನು ತಕ್ಷಣವೇ ಭಟ್ಟರಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.

ಜನವಸತಿ ಪ್ರದೇಶದಲ್ಲಿ ಅನುಮತಿಯಿಲ್ಲದೆ ಕಾರ್ಯನಿರ್ವಹಿಸುತ್ತಿದ್ದ ಕ್ರೇನ್​ ಬಗ್ಗೆ ಹತ್ತಾರು ಬಾರಿ ಪೊಲೀಸ್ ಠಾಣೆ, ಪಾಲಿಕೆ ಅಧಿಕಾರಿಗಳಿಗೆ ದೂರು ನೀಡಲಾಗಿತ್ತು. ಆದರೂ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳದ ಕಾರಣ ಅನಾಹುತ ನಡೆದಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Rakesh arundi

Leave a Reply

Your email address will not be published. Required fields are marked *