Cylinder blast: ಸಿಲಿಂಡರ್ ಸ್ಫೋಟಗೊಂಡು ವೃದ್ಧೆ ಸಾವು, ಮೂವರು ಸ್ಥಿತಿ ಗಂಭೀರ
ಬೆಂಗಳೂರಿನ ಕೆ.ಆರ್ ಪುರಂ ವ್ಯಾಪ್ತಿಯ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ವೃದ್ಧೆಯೊಬ್ಬರು ಮೃತಪಟ್ಟಿದ್ದು, ಮೂವರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ.
ಅಕ್ಕಯ್ಯಮ್ಮ (80) ಮೃತ ವೃದ್ಧೆ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅನಿಲ ಸೋರಿಕೆಯಿಂದಾಗಿ ಸಿಲಿಂಡರ್ ಸ್ಫೋಟಗೊಂಡಿದ್ದು, ಮನೆ ಸಂಪೂರ್ಣ ಛಿದ್ರವಾಗಿದೆ. ಸ್ಪೋಟದ ತೀವ್ರತಗೆ ಅಕ್ಕ-ಪಕ್ಕದ ಮನೆಗಳ ಕಿಟಕಿ ಗಾಜುಗಳು ಒಡೆದು ಹೋಗಿವೆ. ಈ ಕುರಿತು ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.