Darshan: ನನ್ನ ಹಣೆ ಬರಹ ಇದ್ದಂಗೆ ಆಗುತ್ತೆ, ಇಲ್ಲಿಗೆ ಬರಬೇಡ ಎಂದ ದರ್ಶನ್, ಕಣ್ಣೀರಿಟ್ಟ ವಿಜಯಲಕ್ಷ್ಮೀ
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎರಡನೇ ಬಾರಿಗೆ ಜೈಲು ಸೇರಿದ ನಟ ದರ್ಶನ್ ಸಂಕಷ್ಟಗಳ ಸುಳಿಯಲ್ಲಿ ಸಿಲುಕಿದ್ದಾರೆ. ಜೈಲಿನಲ್ಲಿರುವ ದರ್ಶನ್ ಅವರನ್ನು ವಿಜಯಲಕ್ಷ್ಮೀ ಭೇಟಿಯಾಗಿದ್ದಾರೆ. ಪತಿ ಜೈಲಿನಲ್ಲಿ ಅನುಭವಿಸ್ತಿರುವ ಕಷ್ಟಗಳನ್ನು ನೋಡಿ ಪತ್ನಿ ವಿಜಯಲಕ್ಷ್ಮೀ ಕಣ್ಣೀರಿಟ್ಟಿದ್ದಾರೆ ಎನ್ನಲಾಗಿದೆ.
ಪರಪ್ಪನ ಅಗ್ರಹಾರದ ಜೈಲಿನಲ್ಲಿ ಹಾಸಿಗೆ, ದಿಂಬು, ಕುರ್ಚಿ ಇಲ್ಲದೇ ಸಮಸ್ಯೆ ಅನುಭವಿಸುತ್ತಿದ್ದು, ಜೈಲಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಸಹಾಯವಾಗಿಲ್ಲ ದೇಹಕ್ಕೆ ಚಟುವಟಿಕೆ ಇಲ್ಲದ ಕಾರಣ ಆರೋಗ್ಯಕ್ಕೂ ಹಾನಿಯಾಗುತ್ತಿದೆ ಎಂದು ಪತ್ನಿ ವಿಜಯಲಕ್ಷ್ಮೀ ಬಳಿ ದರ್ಶನ್ ಅಳಲು ತೋಡಿಕೊಂಡಿದ್ದಾರೆ.
ಪತಿಯ ಸ್ಥಿತಿ ಕಂಡು ಪತ್ನಿ ವಿಜಯಲಕ್ಷ್ಮೀ ಕಣ್ಣೀರಿಟ್ಟಿದ್ದಾರೆ. ಇನ್ನು ಜೈಲಿಗೆ ಬಂದು ದರ್ಶನ್ ಅವರನ್ನು ಭೇಟಿಯಾಗಲು ಗಂಟೆಗಳ ಕಾಲ ವಿಜಯಲಕ್ಷ್ಮೀ ಕಾಯಬೇಕಾಗುತ್ತಿದ್ದು “ನೀನು ಜೈಲಿಗೆ ಬರೋಕೆ ಹೋಗಬೇಡ. ನನ್ನ ಹಣೆ ಬರಹ ಇದ್ದಂಗೆ ಆಗುತ್ತೆ.” ಎಂದು ದರ್ಶನ್ ಹೇಳಿದಾರಂತೆ.