Dasara inauguration: ಬಾನು ಮುಷ್ತಾಕ್: ದಸರಾ ಉದ್ಘಾಟನೆ ಫಿಕ್ಸ್

ಲೇಖಕಿ ಮತ್ತು ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರು ಮೈಸೂರು ದಸರಾ ಉದ್ಘಾಟಿಸುವುದನ್ನು ವಿರೋಧಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ. ಈ ಮೂಲಕ ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವುದಕ್ಕೆ ಇದ್ದ ಕಾನೂನು ತೊಡಕು ನಿವಾರಣೆಯಾಗಿದೆ.

ಈ ಭಾರಿಯ ನಾಡಹಬ್ಬ ಮೈಸೂರು ದಸಾರಾವನ್ನು ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರಿಂದ ಉದ್ಘಾಟಿಸುವ ಕರ್ನಾಟಕ ರಾಜ್ಯ ಸರ್ಕಾರದ ತೀರ್ಮಾನವನ್ನು ವಿರೋಧಿಸಿ, ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಈ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್‌ ಆದೇಶವನ್ನು ಎತ್ತಿಹಿಡಿದಿರುವ ಸುಪ್ರೀಂಕೋರ್ಟ್‌ ದ್ವಿಸದಸ್ಯ ಪೀಠ, ಅರ್ಜಿಯನ್ನು ವಜಾಗೊಳಿಸಿದೆ.

ದಸರಾ ಉದ್ಘಾಟನೆಗೆ ಬಾನುಮುಷ್ತಾಕ್​ ಆಹ್ವಾನಿಸುವ ಕರ್ನಾಟಕ ಸರ್ಕಾರದ ನಿರ್ಧಾರವು ರಾಜಕೀಯ ಮತ್ತು ನ್ಯಾಯಾಂಗ ವಲಯಗಳಲ್ಲಿ ಚರ್ಚೆಗೆ ಗುರಿಯಾಗಿತ್ತು. ಕರ್ನಾಟಕ ಹೈಕೋರ್ಟ್ ಈ ನಿರ್ಧಾರವನ್ನು ಅನುಮೋದಿಸಿದ್ದರೂ, ಅದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​  ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಇದೀಗ ಅಲ್ಲಿಯೂ ಅರ್ಜಿ ವಜಾ ಮಾಡಿದ್ದಾರೆ.

Rakesh arundi

Leave a Reply

Your email address will not be published. Required fields are marked *