Dharmasthala Case: ಧರ್ಮಸ್ಥಳ ಪ್ರಕರಣ: ಸಮೀರ್ ಎಂಡಿ ಸೇರಿ ಐದಕ್ಕೂ ಹೆಚ್ಚು ಯೂಟ್ಯೂಬರ್‌ಗಳಿಗೆ ಎಸ್ಐಟಿ ನೋಟೀಸ್
ಧರ್ಮಸ್ಥಳ ಸಾಮೂಹಿಕ ಶವಗಳನ್ನು ಹೂತಿಟ್ಟ ಆರೋಪಕ್ಕೆ ಸಂಬಂಧಪಟ್ಟಂತೆ ವಿಡಿಯೋ ಮಾಡಿದ್ದ ಯೂಟ್ಯೂಬರ್ ಗಳಿಗೆ ಸಂಕಷ್ಟ ಶುರುವಾಗಿದೆ. ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಮತ್ತೊಮ್ಮೆ ನೋಟಿಸ್ ಜಾರಿಗೊಳಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಯೂಟ್ಯೂಬರ್ ಸಮೀರ್ ಎಂಡಿ ಸೇರಿದಂತೆ ಐದಕ್ಕೂ ಹೆಚ್ಚು ಯೂಟ್ಯೂಬರ್‌ಗಳಿಗೆ ನೊಟೀಸ್ ನೀಡಲಾಗಿದ್ದು, ಅವರು ಬೆಳ್ತಂಗಡಿ ಎಸ್ ಐಟಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.
ಈ ಹಿಂದಿನ ತನಿಖೆಯ ಸಂದರ್ಭದಲ್ಲಿ ಆರೋಪಿ ಚಿನ್ನಯ್ಯ ನೀಡಿದ ಹೇಳಿಕೆಗಳನ್ನು ಆಧರಿಸಿ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಈ ವಿಚಾರಣೆಗಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಈ ಬಾರಿ ಯಾವ ಪ್ರಶ್ನೆಗಳನ್ನು ಕೇಳಬೇಕು ಎಂಬುದರ ಕುರಿತು ಅಧಿಕಾರಿಗಳು ಪೂರ್ವ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.