Dharmasthala Prakasha: ಧರ್ಮಸ್ಥಳ ಪ್ರಕಣ: ಎಸ್.ಐ.ಟಿ ವಿಚಾರಣೆಗೆ ಗ್ರಾ.ಪಂ ಮಾಜಿ ಅಧ್ಯಕ್ಷ, ಉಪಾಧ್ಯಕ್ಷ ಶ್ರೀನಿವಾಸ ಹಾಜರ್

ಧರ್ಮಸ್ಥಳ ಪ್ರಕಣಕ್ಕೆ ಸಂಭಂದಿಸಿದಂತೆ ಮಾಧ್ಯಮಗಳಲ್ಲಿ ನೀಡಿದ ಹೇಳಿಕೆಗಳ ವಿಚಾರವಾಗಿ ಧರ್ಮಸ್ಥಳ ಗ್ರಾಮಪಂಚಾಯತಿನ ಮಾಜಿ ಕೇಶವ ಗೌಡ ಅಧ್ಯಕ್ಷ ಹಾಗೂ ಹಾಲಿ ಉಪಾಧ್ಯಕ್ಷ ಶ್ರೀನಿವಾಸ ರಾವ್ ಅವರಿಗೆ ಎಸ್.ಐ.ಟಿ ನೋಟೀಸ್ ನೀಡಿ ವಿಚಾರಣೆಗೆ ಕರೆಸಿಕೊಂಡಿದೆ.

ಇಂದು ಬೆಳಗ್ಗೆ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಹಾಗೂ ಮಾಜಿ ಅಧ್ಯಕ್ಷ ಕೇಶವ ಗೌಡ ಬೆಳಾಲು ಅವರು ವಿಚಾರಣೆಗೆ ಹಾಜರಾಗಿದ್ದು, ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕೇಶವ ಗೌಡ ಹಾಗೂ ಶ್ರೀನಿವಾಸ ರಾವ್ ಅವರು ಹಲವು ಬಾರಿ ಮಾದ್ಯಮಗಳಿಗೆ ಹೇಳಿಕೆ ನೀಡಿ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಅನಾಥ ಶವಗಳು ಸಿಕ್ಕಿದ್ದು ಅದರ ಎಲ್ಲ ದಾಖಲೆಗಳು ಗ್ರಾಮಪಂಚಾತಿಯಲ್ಲಿದೆ ಎಂದು ಹೇಳಿಕೆ ನೀಡಿದ್ದರು.

ಅದೇರೀತಿ ಕೇಶವ ಗೌಡ ಸ್ಮಶಾನಾಗುವ ಮೊದಲು ಬಂಗ್ಲೆ ಗುಡ್ಡ ಪರಿಸರಸಲ್ಲಿ ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ್ದರು. ಈ ಹಿನ್ನಲೆಯಲ್ಲಿ ಇವರಿಬ್ಬರಿಗೂ ನೊಟೀಸ್ ನೀಡಿ ವಿಚಾರಣೆಗೆ ಕರೆಸಲಾಗಿತ್ತು. ಮಧ್ಯಾಹ್ನ 1.30 ಕ್ಕೆ ವಿಚಾರಣೆ ಮುಗಿಸಿ ಹಿಂತಿರುಗಿದ್ದಾರೆ.

Rakesh arundi

Leave a Reply

Your email address will not be published. Required fields are marked *