Udupi: ಕಾರ್ಕಳದ ಮಾಜಿ ಶಾಸಕನ ಪುತ್ರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ
ಉಡುಪಿ ಜಿಲ್ಲೆಯ ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ(48) ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ.
ಸುದೀಪ್ ಭಂಡಾರಿ ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ಸುದೀಪ್ ಭಂಡಾರಿ ಹೆಬ್ರಿಯಲ್ಲಿ ವೈನ್ ಶಾಪ್ ನಡೆಸಿಕೊಂಡಿದ್ದರು. ಸುದೀಪ್ ಅವರು ಅತ್ಯಂತ ಸರಳ ವ್ಯಕ್ತಿತ್ವದವರಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಹೆಬ್ರಿ ತಾಲೂಕು ನಿವಾಸಿಯಾಗಿರುವ ಸುದೀಪ್, ವ್ಯವಹಾರದಲ್ಲಿ ಉಂಟಾದ ಆರ್ಥಿಕ ನಷ್ಟವೇ ಅವರ ಆತ್ಮಹತ್ಯೆಗೆ ಕಾರಣ ಎಂದು ಶಂಕಿಸಲಾಗಿದೆ. ಮೃತ ಸುದೀಪ್ ಭಂಡಾರಿ ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಈ ಸಂಬಂಧ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.