Devegowda Health: ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಆರೋಗ್ಯದಲ್ಲಿ ಚೇತರಿಕೆ – ಆಸ್ಪತ್ರೆಯಿಂದ ಡಿಸ್ಚಾರ್ಜ್
ಅನಾರೋಗ್ಯ ಹಿನ್ನೆಲೆ ಕಳೆದ ವಾರ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಅವರ ಆರೋಗ್ಯ ಇದೀಗ ಸಂಪೂರ್ಣ ಚೇತರಿಸಿಕೊಂಡಿದ್ದು, ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಅವರು ಪದ್ಮನಾಭನಗರದ ನಿವಾಸಕ್ಕೆ ತೆರಳಿದ್ದಾರೆ.
ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್ ಕಾರಣ ದೇವೇಗೌಡರನ್ನು ಅಕ್ಟೋಬರ್ 6 ರಂದು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ವೈದ್ಯರ ಸಲಹೆಯಂತೆ ಮುಂದಿನ ಕೆಲವು ದಿನಗಳು ಮನೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಬಿಸಿಲು, ಧೂಳಿರುವ ವಾತಾವರಣಕ್ಕೆ ಹೋಗದಂತೆ ಮತ್ತೆ ಸೋಂಕು ತಗಲದಂತೆ ಎಚ್ಚರ ವಹಿಸಬೇಕು ಎಂದು ವೈದ್ಯರು ಅವರಿಗೆ ಸಲಹೆ ನೀಡಿದ್ದಾರೆ.