Gandhi-Jayanti: ಗಾಂಧೀಜಿಯವರ ತ್ಯಾಗ, ಬಲಿದಾನ ಸದಾ ನಮಗೆ ಆದರ್ಶಪ್ರಾಯ: ಸಿಎಂ ಸಿದ್ದರಾಮಯ್ಯ

ದೇಶಾದ್ಯಂತ ಇಂದು ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಗಾಂಧಿ ಅವರ ತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶಪ್ರಾಯವಾಗಿರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಗಾಂಧಿ ಜಯಂತಿ ಪ್ರಯುಕ್ತ ಮೈಸೂರಿನ ಮಹಾತ್ಮ ವೃತ್ತದಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮುಖ್ಯಮಂತ್ರಿಗಳು ಸುದ್ದಿಗಾರರೊಂದಿಗೆ ಮಾತನಾಡಿದರು.

ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತಿದೆ. ಬಾಪು ಅವರ ನೇತೃತ್ವದಲ್ಲಿ ನಡೆದ ಹೋರಾಟದ ಫಲದಿಂದ ನಾವಿಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಗಾಂಧೀಜಿಯವರ ತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶಪ್ರಾಯವಾಗಿದೆ ಎಂದು ಹೇಳಿದರು.

ಇಂದು ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನವೂ ಕೂಡಾ ಹೌದು, ದೇಶ ಕಂಡ ಅತ್ಯಂತ ಪ್ರಾಮಾಣಿಕ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರೀ ಎಂದು ಅವರನ್ನು ಸ್ಮರಿಸಿದರು. ಈ ಬಾರಿ ಜಯಂತಿಗಳೊಟ್ಟಿಗೆ ನಾಡ ಹಬ್ಬ ದಸರಾ ಕೂಡ ಜೊತೆಯಾಗಿದೆ. ನಾಡಿನ ಸಮಸ್ತ ಜನತೆಗೆ ವಿಜಯದಶಮಿ ಶುಭಾಶಯಗಳು ಕೂಡ ಕೋರುತ್ತೇನೆ ಎಂದು ತಿಳಿಸಿದರು.

Rakesh arundi

Leave a Reply

Your email address will not be published. Required fields are marked *