Mysuru: ಗ್ಯಾಸ್ ಗೀಸರ್ ಸೋರಿಕೆ: ಒಟ್ಟಿಗೆ ಸ್ನಾನಕ್ಕೆ ಹೋಗಿದ್ದ ಅಕ್ಕ ತಂಗಿ ಸಾವು
ಗ್ಯಾಸ್ ಗೀಸರ್ ಸೋರಿಕೆಯಾಗಿ ಇಬ್ಬರು ಯುವತಿಯರು ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ.
ಸಿಮ್ರಾನ್ ತಾಜ್ (20) ಮತ್ತು ಗುಲ್ಫಾರ್ಮ್ (23) ಮೃತ ಯುವತಿರು ಎಂದು ಗುರುತಿಸಲಾಗಿದೆ. ಇಬ್ಬರೂ ಒಟ್ಟಿಗೆ ಸ್ನಾನ ಮಾಡಲು ಬಾತ್ರೂಮ್ಗೆ ಹೋಗಿದ್ದಾರೆ. ಈ ವೇಳೆ ಬಾತ್ರೂಂನಲ್ಲಿದ್ದ ಗ್ಯಾಸ್ ಗೀಸರ್ನಿಂದ ಕಾರ್ಬನ್ ಮಾನಾಕ್ಸೈಡ್ ಸೋರಿಕೆಯಾಗಿದೆ. ಇದರ ಪರಿಣಾಮದಿಂದಾಗಿ ಇಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಸ್ನಾನಕ್ಕೆ ಹೋದವರು ಬಹಳ ಹೊತ್ತಾದರೂ ಹೊರಬಾದನ್ನು ಗಮನಿಸಿದ ಅವರ ತಂದೆ ಅಲ್ತಾಫ್ ಬಾಗಿಲು ಬಡಿದಿದ್ದಾರೆ.
ಬಾಗಿಲು ತೆಗೆಯದಿದ್ದಾಗ ಅನುಮಾನಗೊಂಡು ಬಾಗಿಲು ಒಡೆದು ನೋಡಿದ್ದಾರೆ. ಆಗ ಇಬ್ಬರೂ ಅರೆಪ್ರಜ್ಞಾವಸ್ಥೆಯಲ್ಲಿ ಇರುವುದು ಕಾಣಿಸಿದೆ. ಕೂಡಲೇ ಇಬ್ಬರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಅಷ್ಟರಲ್ಲಾಗಲೇ ಇಬ್ಬರ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.