HD Deve Gowda: ಎಚ್‌ಡಿ ದೇವೇಗೌಡರ ಆರೋಗ್ಯದಲ್ಲಿ ಸುಧಾರಣೆ: ಕುಮಾರಸ್ವಾಮಿ

ಚಳಿ ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್​ನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.

ಹೆಚ್​ಡಿ ದೇವೇಗೌಡರನ್ನು ಅನಾರೋಗ್ಯದಲ್ಲಿ ಹಿನ್ನಲೆ ಐಸಿಯುನಲ್ಲಿ ಚಿಕಿತ್ಸೆ ಕೊಡಲಾಗಿತ್ತು. ಅವರ ಆರೋಗ್ಯದಲ್ಲಿ ಸುಧಾರಣೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಐಸಿಯು ವಾರ್ಡ್ ನಿಂದ ಸಾಮಾನ್ಯ ವಾರ್ಡ್ ಗೆ ಶಿಫ್ಟ್ ಮಾಡಲಾಗಿತ್ತು. ಈಗ ಮತ್ತೆ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರು ಮಾತಾನಾಡಿ, ದೇವೇಗೌಡರ ಅಭಿಮಾನಿಗಳು ಮತ್ತು ಕಾರ್ಯಕರ್ತರು ಆತಂಕಪಡುವ ಅಗತ್ಯವಿಲ್ಲ. ಮೂರು-ನಾಲ್ಕು ದಿನಗಳಲ್ಲಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ. ಕಳೆದ ಮೂರು ದಿನಗಳಿಂದ ವೈದ್ಯರು ಚಿಕಿತ್ಸೆನೀಡಿದ್ದಾರೆ. ದೇವರ ಮತ್ತು ಜನತೆಯ ಆಶೀರ್ವಾದದಿಂದ ಆರೋಗ್ಯವಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.





Rakesh arundi

Leave a Reply

Your email address will not be published. Required fields are marked *