Mysore: ಹಾಡಹಗಲೇ ಭೀಕರ ಕೊಲೆ: ಬರ್ಬರ ಹತ್ಯೆ ಕಂಡು ಬೆಚ್ಚಿಬಿದ್ದ ಮೈಸೂರು
ಮೈಸೂರಿನ ವಸ್ತುಪ್ರದರ್ಶನ ಮೈದಾನದ ಬಳಿ ಹಾಡಹಗಲೇ ದುಷ್ಕರ್ಮಿಗಳು ಕಣ್ಣಿಗೆ ಖಾರದಪುಡಿ ಎರಚಿ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ಕೊಲೆಯಾದ ವ್ಯಕ್ತಿ ಕ್ಯಾತಮಾರನಹಳ್ಳಿ ನಿವಾಸಿ ಗಿಲ್ಕಿ ವೆಂಕಟೇಶ್ ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಬಂದಿದ್ದ ಐದರಿಂದ ಆರು ಜನ ದುಷ್ಕರ್ಮಿಗಳು ಕೃತ್ಯ ನಡೆಸಿದ್ದಾರೆ ಎನ್ನಲಾಗಿದೆ.
ಇತ್ತೀಚೆಗೆ ವರುಣಾ ಗ್ರಾಮದ ಹೋಟೆಲ್ ಮುಂಭಾಗ ಕ್ಯಾತಮಾರನಹಳ್ಳಿಯ ರೌಡಿ ಶೀಟರ್ ಕಾರ್ತಿಕ್ ಎಂಬಾತನ ಕೊಲೆ ಆಗಿತ್ತು. ಕಾರ್ತಿಕ್ ಹಾಗೂ ಇಂದು ಕೊಲೆಯಾದ ವೆಂಕಟೇಶ್ ಗೂ ನಿಕಟ ಸಂಪರ್ಕವಿತ್ತು ಎನ್ನಲಾಗಿದೆ. ಕಾರ್ತಿಕ್ ಕೊಲೆಗೆ ವೆಂಕಟೇಶ್ ಕುಮ್ಮಕ್ಕು ನೀಡಿದ್ದ ಎನ್ನಲಾಗಿದೆ. ಹಾಗಾಗಿ ಕಾರ್ತಿಕ್ ಕೊಲೆಗೆ ರಿವೆಂಜ್ ತೆಗೆದುಕೊಳ್ಳಲು ಕಾರ್ತಿಕ್ ನ ಕಡೆಯವರು ಕೊಲೆ ಮಾಡಿದ್ದಾರೆಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ನಜರಬಾದ್ ಠಾಣೆ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ.