Hasanamba Devi: ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಜನಸಾಗರ: ಬೆಂಗಳೂರು-ಹಾಸನ ಬಸ್ ಸಂಚಾರ ಸ್ಥಗಿತ
ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಧಾವಿಸುತ್ತಿದ್ದರು. ವಾರಾಂತ್ಯ ಹಾಗೂ ದೀಪಾವಳಿ ರಜೆ ಕಾರಣದಿಂದ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಹಾಸನ ಜಿಲ್ಲಾಡಳಿತ ಶಿಷ್ಟಚಾರ ಪಾಲನೆಯಲ್ಲಿ ಮಾರ್ಪಾಡು ಮಾಡಿದೆ.
ಹಾಸನಾಂಬೆ ದೇಗುಲ ಹಾಗೂ ಸುತ್ತ ಮುತ್ತ ಭಾರಿ ಸಂಖ್ಯೆಯಲ್ಲಿ ಜನರು ಬರುತಿದ್ದು, ಭಕ್ತರನ್ನು ನಿಯಂತ್ರಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಕಿಲೋ ಮೀಟರ್ ಗಟ್ಟಲೇ ಸರತಿ ಸಾಲಿನಲ್ಲಿ ನಿಂತು ಭಕ್ತರು ದರ್ಶನ ಪಡೆಯುತ್ತಿದ್ದಾರೆ. ಅಸಾಧ್ಯದ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದಂತೆ ತಾತ್ಕಾಲಿಕವಾಗಿ ಕೆಎಸ್ಆರ್ಟಿಸಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.
ಈಗಾಗಲೇ ಸಹಸ್ರಾರು ಭಕ್ತರು ಹಾಸನಾಂಬೆ ದರ್ಶನ ಪಡೆಯಲು 50 ಸಾವಿರ ಮುಂಗಡ ಟಿಕೆಟ್ ಕಾಯ್ದಿರಿಸಿದ್ದಾರೆ. ಹೀಗಾಗಿ, ತಾತ್ಕಾಲಿಕವಾಗಿ ಟಿಕೆಟ್ ಬುಕಿಂಗ್ ಕೂಡ ಸ್ಥಗಿತಗೊಳಿಸಲಾಗಿದೆ. ಹಾಸನಾಂಬೆ ದರ್ಶನಕ್ಕೆ ಭಕ್ತರ ಸಾಗರ ಹೆಚ್ಚಾಗಿರುವ ಕಾರಣ ದರ್ಶನಕ್ಕೆ ಕಿಲೋಮೀಟರ್ಗಟ್ಟಲೇ ಸಾಲು ದೊಡ್ಡದಾಗಿದೆ.