Mangaluru: ಹೈ ಕಮಾಂಡ್ ತೀರ್ಮಾನ ಮಾಡಿದರೆ ಐದು ವರ್ಷವೂ ನಾನೇ ಸಿಎಂ: ಸಿದ್ದರಾಮಯ್ಯ
ಪಕ್ಷದ ಹೈ ಕಮಾಂಡ್ ತೀರ್ಮಾನ ಮಾಡಿದರೆ ಐದು ವರ್ಷವೂ ನಾನೇ ಸಿಎಂ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರ ಜೊತೆಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ಪರ್ಧೆಯಲ್ಲಿರುವವರನ್ನು ತಪ್ಪಿಸಲು ಆಗಲ್ಲ. ಮುಖ್ಯಮಂತ್ರಿ ಸ್ಥಾನಕ್ಕೆ ಸ್ಪರ್ಧಿಸುವ ಹಕ್ಕು ಎಲ್ಲರಿಗೂ ಇದೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಹೈಕಮಾಂಡ್ ತೀರ್ಮಾನ ಮಾಡಿದರೆ ನಾನೇ ಪೂರ್ಣಾವಧಿ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.