Caste census: ಜಾತಿಗಣತಿ ತಡೆಗೆ ನಕಾರ; ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನಡೆಸುತ್ತಿರುವ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ಗುರುವಾರ ನಿರಾಕರಿಸಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಜಾತಿ ಗಣತಿಗೆ ತಡೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರನ್ನೊಳಗೊಂಡ ವಿಭಾಗೀಯ ಪೀಠ, ಎರಡು ದಿನ ವಿವರವಾದ ವಾದಗಳನ್ನು ಆಲಿಸಿತು. ಅಂತಿಮವಾಗಿ ಇಂದು ಜಾತಿ ಗಣತಿಗೆ ತಡೆ ನೀಡಲು ನಿರಾಕರಿಸಿ ಮಧ್ಯಂತರ ಆದೇಶ ಹೊರಡಿಸಿದೆ.

ಸಮೀಕ್ಷೆಗೆ ಕೋರ್ಟ್ ವಿಧಿಸಿದ ಷರತ್ತುಗಳು

ದತ್ತಾಂಶವನ್ನು ರಾಜ್ಯ ಸರ್ಕಾರ ಸೇರಿ ಯಾರಿಗೂ ಬಹಿರಂಗಪಡಿಸಬಾರದು. ದತ್ತಾಂಶದ ಗೌಪ್ಯತೆಯನ್ನು ಹಿಂದುಳಿದ ವರ್ಗಗಳ ಆಯೋಗ ರಕ್ಷಿಸಬೇಕು ಎಂದು ಸೂಚಿಸಿದೆ.

 ಜನರು ಸ್ವಯಂಪ್ರೇರಣೆಯಿಂದ ನೀಡಿದರಷ್ಟೇ ಮಾಹಿತಿ ಪಡೆಯಬೇಕು. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು.ಮಾಹಿತಿ ನೀಡುವಂತೆ ಯಾವುದೇ ಒತ್ತಡ ಹಾಕಬಾರದು ಎಂದು ಹೈಕೋರ್ಟ್ ಮಹತ್ವದ ಷರತ್ತುಗಳನ್ನು ವಿಧಿಸಿ ಮಧ್ಯಂತರ ಆದೇಶ ಹೊರಡಿಸಿದೆ. ಅಲ್ಲದೇ ದತ್ತಾಂಶದ ಗೌಪ್ಯತೆ ಸಂಬಂಧ ಪ್ರಮಾಣಪತ್ರ ಸಲ್ಲಿಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ಹೈಕೋರ್ಟ್ ಸೂಚನೆ ನೀಡಿ ಮುಂದಿನ ವಿಚಾರಣೆಯನ್ನು ಡಿಸೆಂಬರ್ 2ನೇ ವಾರಕ್ಕೆ ಮುಂದೂಡಿದೆ.

Rakesh arundi

Leave a Reply

Your email address will not be published. Required fields are marked *