KSRTC: ನಾಳೆಯಿಂದ ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಬ್ರೇಕ್ ಹಾಕಿದ ಕೆ. ಎಸ್. ಆರ್. ಟಿ .ಸಿ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆಯಿಂದ ಐದು ದಿನಗಳ ಕಾಲ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಕೆ. ಎಸ್. ಆರ್. ಟಿ .ಸಿ ಬ್ರೇಕ್ ಹಾಕಿದೆ.

ಅಕ್ಟೋಬರ್ 15 ರಿಂದ ಅಕ್ಟೋಬರ್ 19ರವರೆಗೆ ಉಪವಾಸ ಸತ್ಯಾಗ್ರಹದ ಅವಧಿಯಲ್ಲಿ ಸಾರಿಗೆ ಬಸ್‌ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಬಾರದು ಅನಿವಾರ್ಯ ಸಂದರ್ಭ ಹೊರತುಪಡಿಸಿ ಯಾರಿಗೂ ರಜೆಯಿಲ್ಲ ಎಂದು ನೋ ವರ್ಕ್, ನೋ ಪೇ ನಿಯಮ ಜಾರಿಗೊಳಿಸಿ ಆದೇಶಿಸಿದೆ.

ಸಾರಿಗೆ ಸಂಸ್ಥೆ ಸಾರ್ವಜನಿಕ ಉಪಯುಕ್ತ ಸೇವಾ ಸಂಸ್ಥೆಯಾಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶ ಸೇರಿದಂತೆ ವಿವಿಧ ಮಾರ್ಗಗಳಲ್ಲಿ ಸಂಚರಿಸುವ ಬಸ್‌ಗಳು ಜನರ ಜೀವನದ ಅವಿಭಾಜ್ಯ ಅಂಗವಾಗಿವೆ. ಇಂತಹ ಸಂದರ್ಭದಲ್ಲಿ ನೌಕರರ ಹೋರಾಟದಿಂದ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಗಳಿವೆ.

ವಿವಿಧ ಬೇಡಿಕೆಗಳ ಈಡರಿಕೆಗೆ ಆಗ್ರಹಿಸಿ ಆಗಸ್ಟ್ 5ರಂದು ಬಸ್ ನಿಲ್ಲಿಸಿ ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ಮುಂದಾಗಿದ್ದರು. ಅದರೆ, ಹೈಕೋರ್ಟ್ ಮುಷ್ಕರ ಮುಂದೂಡುವಂತೆ ಸೂಚಿಸಿತ್ತು. ಇದರಿಂದ ಮುಷ್ಕರ ಕೈಬಿಟ್ಟಿದ್ದರು. ಇಲ್ಲಿಯವರೆಗೂ ಸರ್ಕಾರ ಯಾವುದೇ ಬೇಡಿಕೆ ಈಡೇರಿಸಲು ಕ್ರಮಕೈಗೊಂಡಿಲ್ಲವೆಂದು ಆಕ್ರೋಶಗೊಂಡಿರುವ ಸಾರಿಗೆ ನೌಕರರು ಮತ್ತೆ ನಾಳೆಯಿಂದ ಹೋರಾಟ ನಡೆಸಲು ತೀರ್ಮಾನಿಸಿದ್ದಾರೆ.

Rakesh arundi

Leave a Reply

Your email address will not be published. Required fields are marked *