Bangalore: ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಬೆಂಗಾವಲು ವಾಹನ ಚಾಲಕ ಆತ್ಮಹತ್ಯೆ!
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ಬೆಂಗಾವಲು ವಾಹನದ ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಬಾಪೂಜಿನಗರದಲ್ಲಿರುವ ತಮ್ಮ ನಿವಾಸದಲ್ಲಿ ಶರಣಗೌಡ ರಾಮಗೋಳ (33) ನೇಣಿಗೆ ಶರಣಾಗಿದ್ದಾನೆ.
ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶರಣಗೌಡಗೆ ಮದುವೆಯಾಗಿ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಕಳೆದ ಎರಡು ವರ್ಷಗಳಿಂದ ಅಶೋಕ್ ಅವರ ಬೆಂಗಾವಲು ವಾಹನ ಚಾಲಕನಾಗಿ ಶರಣಗೌಡ ಕರ್ತವ್ಯ ನಿರ್ವಹಿಸುತ್ತಿದ್ದರು. ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಶರಣಗೌಡ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ಆಗಮಿಸಿದ ಆರ್ ಅಶೋಕ್ ಅವರು, ಅವರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಎರಡು ವರ್ಷದಿಂದ ನನ್ನ ಬಳಿ ಕೆಲಸ ಮಾಡುತ್ತಿದ್ದರು. ಬಹಳ ಸೈಲೆಂಟ್ ವ್ಯಕ್ತಿ. ಯಾವುದೇ ದುರ ಭ್ಯಾಸ ಇರಲಿಲ್ಲ. ಅವರ ಪತ್ನಿ ಸಂಚಾರಿ ಪೊಲೀಸ್ ಕಾನ್ಸ್ಟೆ ಬಲ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಅವರ ಮನೆಯಲ್ಲಿ ಆರ್ಥಿಕವಾಗಿ ಚೆನ್ನಾಗಿದ್ದಾರೆ. ನನಗೆ ತಿಳಿದ ಹಾಗೇ ಅವರಿಗೆ ಯಾವುದೇ ಆರ್ಥಿಕ ಸಮಸ್ಯೆ ಇರಲಿಲ್ಲ. ಯಾವ ಕಾರಣಕ್ಕೆ ಹೀಗೆ ಮಾಡಿಕೊಂಡಿದ್ದಾನೆ ಎನ್ನುವುದು ಗೊತ್ತಿಲ್ಲ. ಬಹಳ ಇನೋಸೆಂಟ್ ಮನುಷ್ಯ. ನಿನ್ನೆ ಡ್ಯೂಟಿಗೆ ಬಂದಿರಲಿಲ್ಲ. ಮೊನ್ನೆ ನೈಸ್ ರೋಡ್ವರೆಗೂ ನನ್ನ ಬಿಟ್ಟು ಸೆಲ್ಯೂಟ್ ಮಾಡಿ ಹೋಗಿದ್ದನು. ಮಂತ್ರಾಲಯಕ್ಕೆ ಹೋಗುವುದಾಗಿ ಹೇಳಿದ್ದ.ಆದರೆ ಈಗ ಈ ರೀತಿ ಮಾಡಿಕೊಂಡಿದ್ದಾನೆ ಎಂದು ಆರ್ ಅಶೋಕ್ ಅವರು ಬೇಸರ ವ್ಯಕ್ತಪಡಿಸಿದ್ದಾರೆ.