RSS: ಆರ್.ಎಸ್.ಎಸ್ ಕಾರ್ಯಕರ್ತರಿಂದ ಲೈಂಗಿಕ ಕಿರುಕುಳ: ಡೆತ್ ನೋಟ್ ಬರೆದಿಟ್ಟು ಟೆಕ್ಕಿ ಆತ್ಮಹತ್ಯೆ
ಆರ್.ಎಸ್.ಎಸ್ ಕಾರ್ಯಕರ್ತರಿಂದ ನಿರಂತರ ಲೈಂಗಿಕ ಕಿರುಕುಳ ಹಿನ್ನೆಲೆಯಲ್ಲಿ ಮನನೊಂದ ಟೆಕ್ಕಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೇರಳದಲ್ಲಿ ನಡೆದಿದೆ.
ಆನಂದ್ (26)ಆತ್ಮಹತ್ಯೆಗೆ ಶರಣಾಗಿರುವ ಟೆಕ್ಕಿ. ಕೇರಳದ ತಿರುವನಂತಪುರಂ ಲಾಡ್ಜ್ ವೊಂದರಲ್ಲಿ ಟೆಕ್ಕಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ನಾನು ಸುಮಾರು ವರ್ಷದಿಂದ ಆರ್ ಎಸ್ ಎಸ್ ಕಾರ್ಯಕರ್ತರಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೆ, ಇದರಿಂದ ನಾನು ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಯುವಕ ಡೆತ್ ನೋಟ್ ಬರೆದಿಟ್ಟಿದ್ದಾನೆ. ಘಟನೆಯ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಆದರೆ ಡೆತ್ ನೋಟ್ ಭಾರೀ ಸಂಚಲನ ಮೂಡಿಸಿದೆ.
ರಾಷ್ಟ್ರೀಯ ಸ್ವಯಂಸೇವೆಯಲ್ಲಿನ ಲೈಂಗಿಕ ದೌರ್ಜನ್ಯ ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ಒತ್ತಾಯಿಸಿದ್ದಾರೆ.