Mahesh shetty thimarodi: ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಎಲ್ಲಿಗೆ ಗಡಿಪಾರು?

ಧರ್ಮಸ್ಥಳದ ಬುರುಡೆ ಪ್ರಕರಣ ಹಾಗೂ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಗಡಿಪಾರು ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಲಾಗಿದೆ. 1 ವರ್ಷದ ಮಟ್ಟಿಗೆ ತಿಮರೋಡಿಯನ್ನು ಗಡಿಪಾರು ಮಾಡಲಾಗಿದ್ದು, ಈ ಅವಧಿಯಲ್ಲಿ ಅವರು ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ.

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಸುಮಾರು 32 ವಿವಿಧ ಪ್ರಕರಣಗಳು ಇವೆ. ಹೀಗಾಗಿ ಇವರನ್ನು ಗಡಿಪಾರು ಮಾಡುವಂತೆ ಆಗ್ರಹಗಳು ವ್ಯಕ್ತವಾಗಿದ್ದವು. ಇದರ ಬೆನ್ನಲ್ಲೇ ಇದೀಗ ಈ ಕ್ರಮ ಕೈಗೊಳ್ಳಲಾಗಿದೆ. ಸಪ್ಟೆಂಬರ್ 20ರಂದೇ ಪುತ್ತೂರು ಸಹಾಯಕ ಆಯುಕ್ತರು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಆದ್ರೆ, ಇನ್ನೂ ಕೂಡ ಗಡಿಪಾರು ಪ್ರಕ್ರಿಯೆ ನಡೆದಿಲ್ಲ. ಯಾಕಂದ್ರೆ ಗಡಿಪಾರು ನೋಟಿಸ್ ಅನ್ನು ಪೊಲೀಸರು ಖುದ್ದು ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ನೀಡಬೇಕು. ಅದಾದ ಬಳಿಕ ಗಡಿಪಾರು ಪ್ರಕ್ರಿಯೆ ನಡೆಯುತ್ತದೆ.

ಮಹೇಶ್‌ ಶೆಟ್ಟಿ ತಿಮರೋಡಿ ಮೇಲೆ ಮೊದಲೇ ಹಲವು ಪ್ರಕರಣಗಳು ದಾಖಲಾಗಿದ್ದವು. ಇದಾದ ಬಳಿಕ ಇದೀಗ ‘ಮಾಸ್ಕ್‌ಮ್ಯಾನ್‌ ಚಿನ್ನಯ್ಯ’ನ ಕೇಸ್‌ ಶುರುವಾದ ಬಳಿಕ ಮತ್ತಷ್ಟು ಪ್ರಕರಣಗಳನ್ನು ಜಡಿಯಲಾಗಿದೆ. ಒಂದಿಷ್ಟು ಪ್ರಕರಣಗಳನ್ನು ಪೊಲೀಸರೇ ದಾಖಲಿಸಿದ್ದರೆ, ಇತರರು ನೀಡಿದ ದೂರಿನ ಮೇರೆಗೂ ಹಲವು ಪ್ರಕರಣಗಳನ್ನು ದಾಖಲಿಸಲಾಗಿದೆ.

Rakesh arundi

Leave a Reply

Your email address will not be published. Required fields are marked *