Vijayapura: ಹಾಡಹಗಲೇ ನಡುರಸ್ತೆಯಲ್ಲಿ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪತಿ
ಹಾಡಹಗಲೇ ನಡುರಸ್ತೆಯಲ್ಲಿ ಪತ್ನಿಯ ಮೇಲೆ ಮನಬಂದಂತೆ ಮಚ್ಚಿನಿಂದ ಪತಿಯೊಬ್ಬ ಹಲ್ಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದ ಆನಂದ ಟಾಕೀಸ್ ಬಳಿ ನಡೆದಿದೆ.
ಸಿಂದಗಿ ತಾಲೂಕಿನ ಕೆರುಟಗಿ ನಿವಾಸಿ ಅನಸೂಯ ಮಾದಾರ್(50) ಹಲ್ಲೆಗೊಳಗಾದ ಮಹಿಳೆ. ಯಮನಪ್ಪ(60) ಮಚ್ಚಿನಿಂದ ಹಲ್ಲೆ ಮಾಡಿದ ವ್ಯಕ್ತಿ ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹ ತಾರಕಕ್ಕೇರಿ ನಡುರಸ್ತೆಯಲ್ಲಿ ಪತ್ನಿಯ ಮೇಲೆ ಹಲ್ಲೆ ಮಾಡಿದ್ದಾನೆ ಪತಿರಾಯ.
ಯಮನಪ್ಪ ಅವರನ್ನು ತಡೆಯಲು ಬಂದ ಸಾರ್ವಜನಿಕರಿಗೆ ಅವಾಜ್ ಹಾಕಿದ್ದಾರೆ. ಅಲ್ಲದೇ ಹಲ್ಲೆ ಮುಂದುವರಿಸಿದ್ದಾರೆ. ಮನಬಂದಂತೆ ಮಚ್ಚಿನಿಂದ ದಾಳಿ ಮಾಡಿದ್ದಾನೆ. ಕೊನೆಗೆ ಸಾರ್ವಜನಿಕರು ಯಮನಪ್ಪನಿಗೆ ಕಲ್ಲು ಹಾಗೂ ದೊಣ್ಣೆಯಿಂದ ಹೊಡೆದು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಗಾಯಾಳು ಅನಸೂಯ ಸಿಂದಗಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.