Bengaluru: ವಿಮಾನದಲ್ಲಿ ಬಾಂಬ್ ಇದೆ ಎಂಬ ಬರಹ: ಕೆಂಪೇಗೌಡ ಏರ್ಪೋರ್ಟ್ನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್!
ದುಬೈನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್ ಇದೆ ಎಂಬ ಬರಹ ಪ್ರಯಾಣಿಕರಲ್ಲಿ ಕೆಲ ಕಾಲ ಆತಂಕ ಸೃಷ್ಟಿಸಿತ್ತು.
ದುಬೈನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನದ ಬಾತ್ ರೂಮ್ನಲ್ಲಿ ‘ಬಾಂಬ್’ ಇದೆ ಎಂದು ಪ್ರಯಾಣಿಕನೊಬ್ಬ ಪೆನ್ನಿಂದ ಬರೆದಿದ್ದಾನೆ. ಈ ಬರಹವನ್ನು ನೋಡಿರುವ ವಿಮಾನ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಸುರಕ್ಷತೆಯ ದೃಷ್ಟಿಯಿಂದ ಕೂಡಲೇ ವಿಮಾನವನ್ನು ಮಂಗಳೂರಿನ ಬದಲಿಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನದಲ್ಲಿ ಎಮರ್ಜೆನ್ಸಿ ಲ್ಯಾಂಡ್ ಮಾಡಲಾಯಿತು. ಬಳಿಕ 168 ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ ಬಳಿಕ ಸಂಪೂರ್ಣ ವಿಮಾನ ಮತ್ತು ಪ್ರಯಾಣಿಕರ ಪರಿಶೀಲನೆ ನಡೆಸಲಾಗಿದ್ದು, ಯಾವುದೇ ಸ್ಫೋಟಕ ವಸ್ತು ಇಲ್ಲ ಎಂದು ತಿಳಿದಿದೆ. ಅಪಾಯವಿಲ್ಲವೆಂದು ತಿಳಿದ ಬಳಿಕ ಪ್ರಯಾಣಿಕರು ಮತ್ತು ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.