Murder Case: ಮೈಸೂರು ದಸರೆಗೆ ಬಲೂನ್ ಮಾರಲು ಬಂದಿದ್ದ ಬಾಲಕಿ ಅತ್ಯಾಚಾರ ಕೊಲೆ: ಆರೋಪಿಗೆ ಗುಂಡೇಟು
ದಸರಾದಲ್ಲಿ ವ್ಯಾಪಾರ ಮಾಡಲು ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪಿಗೆ ಪೊಲೀಸರು ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.
ಹೊಟ್ಟೆಪಾಡಿಗಾಗಿ ಬಲೂನ್ ವ್ಯಾಪಾರಕ್ಕಾಗಿ ಮೈಸೂರು ದಸರಾಕ್ಕೆ ಬಂದಿದ್ದ ಬಾಲಕಿಯ ಶವ, ವಸ್ತು ಪ್ರದರ್ಶನ ಆವರಣ ಸಮೀಪ ಪತ್ತೆಯಾಗಿತ್ತು. 10 ವರ್ಷದ ಬಾಲಕಿ ಮೇಲೆ ಕಾಮುಕ ಅತ್ಯಾಚಾರ ಎಸಗಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದ.
ಬಲೂನ್ ವ್ಯಾಪಾರಕ್ಕಾಗಿ ಮೈಸೂರು ದಸರಾಕ್ಕೆ ಬಂದಿದ್ದ ಹಕ್ಕಿಪಿಕ್ಕಿ ಜನಾಂಗದ ಸುಮಾರು 50 ಕುಟುಂಬಗಳು ಅರಮನೆ ಮುಂಭಾಗದ ದೊಡ್ಡ ಕೆರೆ ಮೈದಾನದ ಬಳಿ ತಾತ್ಕಾಲಿಕವಾಗಿ ತಂಗಿದ್ದವು. ಈತ ರಾತ್ರಿ ಟೆಂಟ್‌ನಲ್ಲಿ ಮಲಗಿದ್ದ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಿ ಪರಾರಿಯಾಗಿದ್ದ. ಸಿಸಿಟಿವಿ ಆಧಾರದ ಮೇಲೆ ಹಂತಕ ಕಾರ್ತಿಕನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಕಾರ್ತಿಕ್ ಕೊಳ್ಳೆಗಾಲದಲ್ಲಿ ಪತ್ತೆಯಾಗಿದ್ದ. ಆತನನ್ನ ಬಂಧಿಸಿ ಮೈಸೂರಿಗೆ ವಾಪಸ್ ಕರೆತರುವಾಗ ಕಾರ್ತಿಕ್ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಮುಂದಾಗಿದ್ದಾನೆ. ಈ ವೇಳೆ ಪೊಲೀಸರ ಆರೋಪಿ ಕಾಲಿಗೆ ಗುಂಡು ಹೊಡೆದಿದ್ದಾರೆ. ಆರೋಪಿ ಕಾರ್ತಿಕ್ ನನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.