BJP Nagamohan Das Commission : ಬಿಜೆಪಿ ಸರ್ಕಾರದ ಹಗರಣ ತನಿಖೆಗೆ ರಚಿಸಿದ್ದ ಆಯೋಗ ದಿಡೀರ್‌ ರದ್ದು

ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿಬಿಎಂಪಿ ನಾಗರೀಕ ಕಾಮಗಾರಿಗಳಲ್ಲಿ ನಡೆದ ಶೇ.40 ಕಮಿಷನ್ ಆರೋಪ ಮತ್ತು ಅಕ್ರಮಗಳ ತನಿಖೆ ನಡೆಸುತ್ತಿದ್ದ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ಆಯೋಗವನ್ನು ಅವಧಿ ಮುಗಿಯುವುದಕ್ಕೂ ಮುನ್ನವೇ ರಾಜ್ಯ ಸರ್ಕಾರ ದಿಢೀರ್ ರದ್ದುಗೊಳಿಸಿದೆ.

ಆಯೋಗವು ಆಗಸ್ಟ್ 30 ರಂದು ತನ್ನ ವರದಿಯನ್ನು ಸಲ್ಲಿಸಿದ್ದು, ಸೆಪ್ಟೆಂಬರ್ 30 ರವರೆಗೆ ವಿಸ್ತರಣೆಯನ್ನು ಕೋರಿತ್ತು. ಆದರೆ, ಈ ಮನವಿಯನ್ನು ಸರ್ಕಾರ ಪರಿಗಣಿಸಿಲ್ಲ ಎಂದು ಹೇಳಲಾಗುತ್ತಿದೆ.

ಕೋವಿಡ್ ಸಾಂಕ್ರಾಮಿಕದ ವೇಳೆ ನಡೆದಿತ್ತು ಎನ್ನಲಾದ ಬಹುಕೋಟಿ ರೂಪಾಯಿ ಹಗರಣ ಸೇರಿದಂತೆ ಹಲವು ಹಗರಣಗಳ ತನಿಖೆಗೆಂದು ಕಾಂಗ್ರೆಸ್ ಸರ್ಕಾರ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ಆಯೋಗ ರಚನೆ ಮಾಡಿತ್ತು. ಇದೀಗ ಆ ಆಯೋಗದ ಅವಧಿ ಮುಗಿಯುವುದಕ್ಕೂ ಮುನ್ನವೇ ವಿಸರ್ಜನೆ ಮಾಡಲಾಗಿದೆ.

ಸೆಪ್ಟೆಂಬರ್ 30 ರವರೆಗೆ ಅಧಿಕಾರ ಅವಧಿ ವಿಸ್ತರಿಸುವಂತೆ ಆಯೋಗ ಮನವಿ ಮಾಡಿತ್ತು. ಅದನ್ನು ಸರ್ಕಾರ ಪರಿಗಣಿಸಿಲ್ಲ ಎನ್ನಲಾಗಿದೆ. ಬಿಜೆಪಿ ಸರ್ಕಾರದ ಅವಧಿಯ 40% ಕಮಿಷನ್ ಆರೋಪ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪದ ತನಿಖೆ‌ ಜವಾಬ್ದಾರಿಯನ್ನು ಈ ಆಯೋಗಕ್ಕೆ‌ ವಹಿಸಲಾಗಿತ್ತು. ಆಯೋಗಕ್ಕೆ‌ ನೀಡಲಾಗಿದ್ದ ವಾಹನ ಹಾಗೂ ಸಿಬ್ಬಂದಿಯನ್ನು ಸರ್ಕಾರ‌ ಮಂಗಳವಾರ ಸಂಜೆಯಿಂದಲೇ ವಾಪಸ್ ಪಡೆದಿದೆ. ಅಧ್ಯಕ್ಷರ ಸೂಚನೆ ಮೇರೆಗೆ ಆಯೋಗದ ಕಾರ್ಯಚಟುವಟಿಕೆ ಅಧಿಕೃತವಾಗಿ ಮುಕ್ತಾಯಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರಿನಲ್ಲಿ ಕಾಮಗಾರಿಗಳಲ್ಲಿ ಅಕ್ರಮದ ಬಗ್ಗೆ ತನಿಖೆ ನಡೆಸಿದ್ದ ಆಯೋಗ, ಆಗಸ್ಟ್ 30 ರಂದು ಸರ್ಕಾರಕ್ಕೆ 8,900 ಪುಟಗಳ ಬೃಹತ್ ತನಿಖಾ ವರದಿಯನ್ನು ಸಲ್ಲಿಸಿತ್ತು. 761 ಕಾಮಗಾರಿಗಳನ್ನು ಪರಿಶೀಲಿಸಿ ಹಲವು ನ್ಯೂನತೆಗಳನ್ನು ಪತ್ತೆಹಚ್ಚಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಶಿಫಾರಸು ಮಾಡಿತ್ತು.

ಏಕ ಸದಸ್ಯ ಆಯೋಗದ ಕೆಲಸ ಮುಗಿದಿದ್ದರೂ ಕೆಲವು ಆಡಳಿತಾತ್ಮಕ ಕಾರ್ಯ ಹಾಗೂ ದಾಖಲೆ ನಿರ್ವಾಹಣೆಗಾಗಿ ಸೆ.30 ರ ವರೆಗೆ ಅವಧಿ ವಿಸ್ತರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿತ್ತು ಎನ್ನಲಾಗಿದೆ. ಆದರೆ, ಸರ್ಕಾರ ಆಯೋಗಕ್ಕೆ ನೀಡಿದ್ದ ಎಲ್ಲಾ ಸವಲತ್ತುಗಳನ್ನು ಏಕಾಏಕಿ ವಾಪಸ್ ಪಡೆದಿದೆ ಎನ್ನಲಾಗುತ್ತಿದೆ.

Rakesh arundi

Leave a Reply

Your email address will not be published. Required fields are marked *