CM Siddaramaiah: ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ಎಂದು ನಾಮಕರಣ: ಸಿಎಂ ಸಿದ್ಧರಾಮಯ್ಯ ಕೇಂದ್ರಕ್ಕೆ ಶಿಫಾರಸು

ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತೇನೆ. ಕೇಂದ್ರ ಸರ್ಕಾರವು ಅನುಮತಿ ನೀಡಿದರೆ ಮುಂದಿನ ದಿನಗಳಲ್ಲಿ ಬಸವ ಮೆಟ್ರೋ ಎಂದು ನಾಮಕರಣ ಮಾಡಲಾಗುವುದು. ಅಲ್ಲದೇ ಮುಂದಿನ ವರ್ಷ ವಚನ ವಿಶ್ವವಿದ್ಯಾಲಯ ಸ್ಥಾಪಿಸುವುದಾಗಿ ಸಿಎಂ ಸಿದ್ಧರಾಮಯ್ಯ ಭರವಸೆ ನೀಡಿದ್ದಾರೆ.

ವಿಶ್ವಗುರು ಬಸವಣ್ಣ ಅವರನ್ನು “ಕರ್ನಾಟಕ ಸಾಂಸ್ಕೃತಿಕ ನಾಯಕ” ಎಂದು ಘೋಷಿಸಿದ ವರ್ಷಾಚರಣೆ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ‘ಬಸವ ಸಂಸ್ಕೃತಿ ಅಭಿಯಾನ-2025’ ರ ಸಮಾರೋಪ ಸಮಾರಂಭದಲ್ಲಿ ಶರಣ ಸಂಸ್ಕೃತಿಯ 301 ಶರಣರು, ಗುರುಗಳು, ಸ್ವಾಮೀಜಿಗಳ ಸಾನಿದ್ಯದಲ್ಲಿ ಸಮುದಾಯದ ಸುಮಾರು 2 ಲಕ್ಷಕ್ಕೂ ಅಧಿಕ ಮಂದಿಯ ಸಮ್ಮುಖದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. 

ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇನೆ. ಇದು ಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆ ಆಗಿದ್ದರೆ ಇವತ್ತೇ “ಬಸವ ಮೆಟ್ರೋ” ಎಂದು ಘೋಷಿಸಿ ಬಿಡುತ್ತಿದ್ದೆ ಎಂದರು.

ನಾನು ಬಸವಣ್ಣನವರ ಅಭಿಮಾನಿ. ಬಸವ ತತ್ವದಲ್ಲಿ‌ ನಂಬಿಕೆ – ಬದ್ಧತೆ ಇಟ್ಟುಕೊಂಡಿದ್ದೇನೆ. ಅಂದಿಗಲ್ಲ-ಇಂದಿಗಲ್ಲ-ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ ಮತ್ತು ಪ್ರಸ್ತುತ ಎನ್ನುವುದು ನನ್ನ ನಂಬಿಕೆ. ಸಹಬಾಳ್ವೆ ಮತ್ತು ಸಹಿಷ್ಣತೆಯನ್ನು ಬಸವಣ್ಣನವರು ಬದುಕಿನುದ್ದಕ್ಕೂ ಸಾರಿದರು. ನಾನೂ ಇದನ್ನು ಪಾಲಿಸುತ್ತೇನೆ ಎಂದರು.

ಬಸವ ಜಯಂತಿಯ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಾನು ಅದೇ ದಿನ ಎಲ್ಲರಿಗೂ ಬದುಕುವ ಸಮಾನ ಅವಕಾಶಗಳನ್ನು ಕಲ್ಪಿಸುವ ಬಸವಣ್ಣನವರ ಆಶಯಗಳನ್ನು ಈಡೇರಿಸುವ ತೀರ್ಮಾನ ಮಾಡಿ, ಹತ್ತು ಹಲವು ಭಾಗ್ಯಗಳ, ಗ್ಯಾರಂಟಿಗಳ ಮೂಲಕ ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ ಬದುಕಿಗೆ ಅವಕಾಶಗಳನ್ನು ಕಲ್ಪಿಸಿದೆ. ಎಲ್ಲಾ ಸರ್ಕಾರಿ ಕಚೇರಿಗಳಲ್ಲೂ ಬಸವಣ್ಣನವರ ಭಾವಚಿತ್ರ ಇಡುವುದನ್ನು ಕಡ್ಡಾಯ ಮಾಡಿದ್ದು ಇದೇ ಕಾರಣಕ್ಕೆ ಎಂದರು.

ಅಂಬೇಡ್ಕರ್ ಅವರೂ ತಮ್ಮ ಸಂವಿಧಾನದಲ್ಲಿ ಬಸವಣ್ಣನವರ ಆಶಯಗಳನ್ನೇ ಹೇಳಿದ್ದಾರೆ. ಹೀಗಾಗಿ ಸಂವಿಧಾನ ಮತ್ತು ಶರಣ ಸಂಸ್ಕೃತಿ ಒಂದೇ ಆಗಿದೆ. ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಸಂವಿಧಾನದ ಆಶಯವಾದರೆ ಬಸವಣ್ಣನವರೂ ಜಾತಿ ರಹಿತ, ವರ್ಗ ರಹಿತ ಬ್ರಾತೃತ್ವದ ಸಮಾಜ ನಿರ್ಮಾಣಕ್ಕೆ ಮುಂದಾಗಿದ್ದರು. ಬಸವಣ್ಣನವರು ನುಡಿದಂತೆ ನಡೆದರು. ನಾವು ಬಸವ ಅನುಯಾಯಿಗಳೂ ನುಡಿದಂತೆ ನಡೆದಾಗ ಮಾತ್ರ ನಿಜವಾದ ಬಸವ ಅನುಯಾಯಿ ಆಗುತ್ತೇವೆ ಎಂದು ಅವರ ಆಶಾಯಗಳನ್ನು ಹೇಳಿದರು.

has been named ‘: CM Siddaramaiah recommends it to the

Rakesh arundi

Leave a Reply

Your email address will not be published. Required fields are marked *