D.K. Shivakumar: ಯಾರೇ ಏನೇ ಆಕ್ಷೇಪಣೆ ಮಾಡಿದರೂ ಸಮೀಕ್ಷೆ ನಡೆಯುತ್ತದೆ: ಡಿ.ಕೆ.ಶಿವಕುಮಾರ್
ಯಾರೇ ಏನೇ ಆಕ್ಷೇಪಣೆ ಮಾಡಿದರೂ ಸಮೀಕ್ಷೆ ನಡೆಯುತ್ತದೆ. ಇಷ್ಟವಿದ್ದ ಪ್ರಶ್ನೆಗೆ ಉತ್ತರಿಸಿ, ಇಲ್ಲದಿದ್ದರೆ ಬೇಡ ಎಂದು ನ್ಯಾಯಾಲಯವೇ ಹೇಳಿದೆ. ಸಮೀಕ್ಷೆಗೆ ವಿರೋಧ ಮಾಡುವುದು ಸರಿಯಲ್ಲಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, “ಈ ಹಿಂದಿನ ಗಣತಿ ಸರಿಯಿಲ್ಲ. ಹೀಗಾಗಿ ಹೊಸದಾಗಿ ಗಣತಿ ಮಾಡಲಾಗುತ್ತಿದೆ. ಎಲ್ಲರೂ ಇದಕ್ಕೆ ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆ” ಎಂದರು.
‘ಬೆಂಗಳೂರಿನ ಜನರ ಬಳಿ ಎಷ್ಟು ಕೋಳಿ, ಕುರಿ ಮತ್ತು ಮೇಕೆ ಇದೆ ಹಾಗೂ ಅವರ ಬಳಿ ಎಷ್ಟು ಚಿನ್ನವಿದೆ ಎಂದು ಕೇಳಬೇಡಿ ಎಂದು ನಾನು ಅಧಿಕಾರಿಗಳಿಗೆ ಹೇಳಿದ್ದೇನೆ. ಅವು ವೈಯಕ್ತಿಕ ವಿಷಯಗಳು. ಅವರ ಬಳಿ ಎಷ್ಟು ಗಡಿಯಾರ, ಫ್ರಿಡ್ಜ್ ಇದೆ ಎಂದು ಕೇಳ ಬೇಡಿ ಅಂತಹ ಪ್ರಶ್ನೆಗಳನ್ನು ಕೇಳುವ ಅಗತ್ಯವಿಲ್ಲ ಎಂದು ಸೂಚಿಸಿದ್ದೇನೆ. ಅವರು ಏನು ಮಾಡುತ್ತಾರೆಂದು ನನಗೆ ತಿಳಿದಿಲ್ಲ ಎಂದರು.