CM Siddaramaiah: ಹೊಸ ಮನೆ ಗೃಹ ಪ್ರವೇಶಕ್ಕೆ ಯಾರಿಗೂ ಆಹ್ವಾನ ನೀಡಲ್ಲ ಎಂದ ಸಿದ್ದರಾಮಯ್ಯ!

ಮೈಸೂರು ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಹೊಸ ಮನೆಯ ಗೃಹಪ್ರವೇಶ ಡಿಸೆಂಬರ್‌ನಲ್ಲಿ  ನಡೆಯಲಿದ್ದು  ಕುಟುಂಬಸ್ಥರನ್ನು ಹೊರತುಪಡಿಸಿ ಯಾರನ್ನು ಆಹ್ವಾನಿಸುವುದಿಲ್ಲ ಎಂದು  ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ತಾವು ನಿರ್ಮಿಸುತ್ತಿರುವ ಹೊಸ ಮನೆಯ ಗೃಹ ಪ್ರವೇಶ ಡಿಸೆಂಬರ್‌ನಲ್ಲಿ ನಡೆಯಲಿದೆ. ಮನೆಯ ಕೆಲಸ ಬಹುತೇಕ ಮುಕ್ತಾಯವಾಗಿದೆ. ಆದರೆ, ಇದು ಕೇವಲ ನಮ್ಮ ಕುಟುಂಬದ ಸದಸ್ಯರ ಸಮ್ಮುಖದಲ್ಲಿ ನಡೆಯುವ ಸಮಾರಂಭವಾಗಿರುತ್ತದೆ. ಯಾರನ್ನೂ ಗೃಹ ಪ್ರವೇಶಕ್ಕೆ ಆಹ್ವಾನಿಸುವುದಿಲ್ಲ. ಮಾಧ್ಯಮದವರನ್ನು ಕೂಡ ಆಹ್ವಾನಿಸುವುದಿಲ್ಲ, ಒಂದು ವೇಳೆ ನೀವು ಬಂದರೂ ಬೇಡ ಎಂದು ಕಳುಹಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಸ್ತುತ ತಾವು ವಾಸಿಸುತ್ತಿರುವ ಮನೆಯ ಬಗ್ಗೆ ಮಾತನಾಡಿದ ಅವರು, ‘ನಾನು ಈಗ ಇರುವ ಮನೆ ನನ್ನದಲ್ಲ, ಮರಿಸ್ವಾಮಿ ಅವರದ್ದು. ಮರಿಸ್ವಾಮಿಯೇ ನನಗೆ ಹಾಗೂ ನನ್ನ ಮಗನಿಗೆ ಅನ್ನದಾತ. ಹೊಸ ಮನೆಗೆ ಸ್ಥಳಾಂತರಗೊಂಡ ನಂತರವೂ, ಮರಿಸ್ವಾಮಿ ಅವರು ಈ ಮನೆಯನ್ನು ಖಾಲಿ ಇಟ್ಟರೆ, ಅದನ್ನು ಸಾರ್ವಜನಿಕರ ಭೇಟಿಗಾಗಿ ಬಳಸಿಕೊಳ್ಳುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಜಾತಿ ಗಣತಿ ಪ್ರಗತಿಯಲ್ಲಿದೆ. ಮೂರುವರೆ ಕೋಟಿ ಜನರ ಗಣತಿಯಾಗಿದೆ. ಇನ್ನೂ ಮೂರುನಾಲ್ಕು ದಿನ ಬಾಕಿ ಇದೆ. ಅಷ್ಟರೊಳಗೆ ರಾಜ್ಯದ ಒಂದುವರೆ ಕೋಟಿ ಮನೆಯ ಗಣತಿ ಆಗುತ್ತದೆ. ನಿಗದಿತ ಅವಧಿಯೊಳಗೆ ಗಣತಿ ಪೂರ್ಣಗೊಳಿಸುತ್ತಾರೆ ಎಂಬ ವಿಶ್ವಾಸ ಇದೆ. ಇಲ್ಲದಿದ್ದರೆ ಅಂದಿನ ಸ್ಥಿತಿ ನೋಡಿ ತೀರ್ಮಾನ ಮಾಡುತ್ತೇವೆ. ಆರಂಭದ ಮೂರು ದಿನ ತಾಂತ್ರಿಕ ದೋಷದಿಂದ ಸ್ವಲ್ಪ ಸಮಸ್ಯೆ ಆಗಿದೆ. ನಂತರ ಯಾವ ಸಮಸ್ಯೆ ಉಂಟಾಗಿಲ್ಲ ಎಂದಿದ್ದಾರೆ.

Rakesh arundi

Leave a Reply

Your email address will not be published. Required fields are marked *