Nobel Peace Prize: ವೆನೆಜುವೆಲಾದ ಮರಿಯಾ ಕೊರಿನಾ ಮಚಾಡೊಗೆ ಒಲಿದ ನೊಬೆಲ್ ಶಾಂತಿ ಪ್ರಶಸ್ತಿ, ಡೊನಾಲ್ಡ್ ಟ್ರಂಪ್‌ಗೆ ಭಾರೀ ಮುಖಭಂಗ!
ನೊಬೆಲ್ ಪ್ರಶಸ್ತಿ ಮೇಲೆ ಭಾರಿ ನಿರೀಕ್ಷೆ ಇಟ್ಟಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಭಾರೀ ನಿರಾಸೆ ಉಂಟಾಗಿದೆ. ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ ದಿಟ್ಟ ಹೋರಾಟಗಾರ್ತಿ ವೆನಿಜುವೆಲಾದ ಮರಿಯಾ ಕೊರಿನಾ ಮಚಾಡೋಗೆ ಒಲಿದಿದೆ.
ವೆನೆಜುವೆಲಾದ ಜನರ ಪ್ರಜಾಪ್ರಭುತ್ವ ಹಕ್ಕುಗಳನ್ನು ಉತ್ತೇಜಿಸಿದ್ದಕ್ಕಾಗಿ ಮರಿಯಾ ಕೊರಿನಾ ಮಚಾಡೊ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಲಾಗಿದೆ. 2025ನೇ ಸಾಲಿನ ನೊಬಲ್ ಶಾಂತಿ ಪ್ರಶಸ್ತಿಗೆ 244 ವ್ಯಕ್ತಿಗಳ ಹೆಸರು ನಾಮಿನೇಟ್ ಆಗಿತ್ತು. ನೊಬೆಲ್ ಶಾಂತಿ ಪ್ರಶಸ್ತಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೆಸರು ಸಹ ಶಿಫಾರಸು ಮಾಡಲಾಗಿತ್ತು. ತಮಗೇ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಬೇಕೆಂದು ಅವಕಾಶ ಸಿಕ್ಕಾಗಲೆಲ್ಲ ಘೋಷಿಸಿಕೊಳ್ಳುತ್ತಿದ್ದ ಟ್ರಂಪ್ ಅವರಿಗೆ ಭಾರೀ ನಿರಾಸೆಯಾಗಿದೆ.