Chikkaballapur: ಚಿಕ್ಕಬಳ್ಳಾಪುರಕ್ಕೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಭೇಟಿ: ನಟನನ್ನು ನೋಡಲು ಹರಿದು ಬಂದ ಜನ ಸಾಗರ
ಆಂಧ್ರ ಪ್ರದೇಶದ ಉಪಮುಖ್ಯ ಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ಅವರು ಇಂದು ಚಿಕ್ಕಬಳ್ಳಪುರಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ತಮ್ಮ ನೆಚ್ಚಿನ ನಟನನ್ನು ನೋಡಲು ಜನ ಸಾಗರವೇ ಹರಿದು ಬಂದಿದೆ.
ಚಿಂತಾಮಣಿಯಲ್ಲಿ ನಡೆದ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ನಟ ಪವನ್ ಕಲ್ಯಾಣ್ ಅವರು ಭಾಗಿಯಾಗಿದ್ದರು. ಈ ವೇಳೆ ಕನ್ನಡದಲ್ಲೇ ಮಾತು ಆರಂಭಿಸಿದ ಪವನ್ ಕಲ್ಯಾಣ್, ಭಾರತ ಮಾತೆಯ ಮುದ್ದಿನ ಮಗಳಾದ ಕರ್ನಾಟಕ ಮಾತೆಗೆ ಹಾಗೂ ಕರ್ನಾಟಕದ ಪ್ರಜೆಗಳಿಗೆ ನನ್ನ ನಮಸ್ಕಾರಗಳು ಎಂದು ಹೇಳಿದ್ದಾರೆ. ತಮ್ಮ ನೆಚ್ಚಿನ ನಟನನ್ನು ನೋಡಲು ಸಾವಿರಾರು ಅಭಿಮಾನಿಗಳು ದೂರದ ಊರುಗಳಿಂದಲೂ ಬಂದಿದ್ದು, ಪವನ್ ಕಲ್ಯಾಣ್ ಅವರ ಮಾತು ಕೇಳಿ ಹರ್ಷೋದ್ಗಾರ ವ್ಯಕ್ತಪಡಿಸಿದ್ದಾರೆ.
ಪವನ್ ಕಲ್ಯಾಣ್ರ ಆಗಮನದ ಹಿನ್ನೆಲೆಯಲ್ಲಿ ಬಿಗಿ ಭದ್ರತೆಯನ್ನು ಮಾಡಲಾಗಿದ್ದು, ಸ್ಥಳೀಯ ಆಡಳಿತ ಮತ್ತು ಪೊಲೀಸ್ ಇಲಾಖೆ ವಿಶೇಷ ಕ್ರಮಗಳನ್ನು ಕೈಗೊಂಡಿದೆ. ಪೊಲೀಸ್ ಇಲಾಖೆಯು ಕಾರ್ಯಕ್ರಮದ ಸ್ಥಳದಲ್ಲಿ ಸ್ಪೋಟಕ ವಸ್ತುಗಳು, ಮಾದಕ ದ್ರವ್ಯಗಳು ಮತ್ತು ಇತರ ಅಪಾಯಕಾರಿ ವಸ್ತುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.
–