Priyank-kharge: ಆರ್‌ಎಸ್‌ಎಸ್‌ ಬಗ್ಗೆ ಸಿಎಂಗೆ ಮತ್ತೊಂದು ಪತ್ರ ಬರೆದ ಪ್ರಿಯಾಂಕ್ ಖರ್ಗೆ! ಪತ್ರದಲ್ಲೇನಿದೆ?

ಸರ್ಕಾರಿ ಶಾಲೆಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗೆ ಅವಕಾಶ ನೀಡದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದ ಸಚಿವ ಪ್ರಿಯಾಂಕ್ ಖರ್ಗೆ, ಇದೀಗ ಮುಖ್ಯಮಂತ್ರಿಗಳಿಗೆ ಮತ್ತೊಂದು ಪತ್ರ ಬರೆದಿದ್ದಾರೆ. ಸರ್ಕಾರಿ ನೌಕರರು ಆರ್‌ಎಸ್‌ಎಸ್‌ ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪ್ರಿಯಾಂಕ್‌ ಖರ್ಗೆ ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಪತ್ರದಲ್ಲೇನಿದೆ?
ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ನೌಕರರುಗಳಿಗೆ ಕರ್ನಾಟಕ ನಾಗರಿಕ ಸೇವಾ(ನಡತೆ) ನಿಯಮಗಳು, 2021 ಅಡಿ ನಿಯಮ 5(1) ಪ್ರಕಾರ ಈ ಕೆಳಕಂಡ ನಿಯಮವು ಈಗಾಗಲೇ ಜಾರಿಯಲ್ಲಿರುತ್ತದೆ.

ಯಾರೇ ಸರ್ಕಾರಿ ನೌಕರನು, ಯಾವುದೇ ರಾಜಕೀಯ ಪಕ್ಷದ ಅಥವಾ ರಾಜಕಾರಣದಲ್ಲಿ ಭಾಗವಹಿಸುವಂಥ ಯಾವುದೇ ಸಂಘ ಸಂಸ್ಥೆಯ ಸದಸ್ಯನಾಗಿರತಕ್ಕದ್ದಲ್ಲ ಅಥವಾ ಅವುಗಳೊಂದಿಗೆ ಅನ್ಯಥಾ ಸಂಬಂಧ ಹೊಂದಿರತಕ್ಕದ್ದಲ್ಲ ಅಥವಾ ಯಾವುದೇ ರಾಜಕೀಯ ಚಳುವಳಿ ಅಥವಾ ಚಟುವಟಿಕೆಯಲ್ಲಿ ಭಾಗವಹಿಸತಕ್ಕದ್ದಲ್ಲ, ಅದರ ಸಹಾಯಾರ್ಥ ವಂತಿಗೆ ನೀಡತಕ್ಕದ್ದಲ್ಲ ಅಥವಾ ಅದಕ್ಕೆ ಯಾವುದೇ ರೀತಿಯ ನೆರವು ನೀಡತಕ್ಕದ್ದಲ್ಲ ಎಂದು ಸ್ಪಷ್ಟವಾಗಿ ನಿರ್ದೇಶನ ನೀಡಲಾಗಿದ್ದರೂ ಸಹ ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಭಾಗವಹಿಸುತ್ತಿರುವುದನ್ನು ಗಮನಿಸಲಾಗಿದೆ.

ರಾಜ್ಯದ ಸರ್ಕಾರಿ ಅಧಿಕಾರಿ ಮತ್ತು ನೌಕರರು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಹಾಗೂ ಇದನ್ನು ಉಲ್ಲಂಘಿಸುವ ಅಧಿಕಾರಿ ನೌಕರರ ವಿರುದ್ಧ ಶಿಸ್ತುಕ್ರಮ ತಿಳಿಸುವ ಸುತ್ತೋಲೆಯನ್ನು ಹೊರಡಿಸಲು ಕೈಗೊಳ್ಳಲಾಗುವುದೆಂದು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿದೆ.

Rakesh arundi

Leave a Reply

Your email address will not be published. Required fields are marked *