Suicide: ಪತ್ನಿ ಕಿರುಕುಳ ಕೊಡ್ತಾಳೆ: ವೀಡಿಯೋ ಮಾಡಿ ರೈಲಿಗೆ ತಲೆಕೊಟ್ಟ ನವವಿವಾಹಿತ
ಪತ್ನಿಯ ಕಿರುಕುಳ ತಾಳಲಾರದೇ ಗಂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಬಿಡದಿಯಲ್ಲಿ ನಡೆದಿದೆ.
ರೇವಂತ್ ಕುಮಾರ್(30) ಮೃತ ವ್ಯಕ್ತಿ. ಬೆಂಗಳೂರು ದಕ್ಷಿಣ ಜಿಲ್ಲೆ ಹಾರೋಹಳ್ಳಿ ತಾಲೂಕಿನ ಅಣ್ಣೆದೊಡ್ಡಿ ಗ್ರಾಮದ ರೇವಂತ್ ಬಿಡದಿ ಬಳಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ. ಕಳೆದ ಐದು ತಿಂಗಳ ಹಿಂದಷ್ಟೇ ಮಲ್ಲಿಕಾ ಎಂಬವಳನ್ನು ಮದುವೆಯಾಗಿದ್ದ. ಈಗ ಪತ್ನಿ ಕಿರುಕುಳ ನೀಡುತ್ತಿದ್ದಾಳೆಂದು ಆರೋಪಿಸಿ ಸೆಲ್ಫಿ ವಿಡಿಯೋ ಮಾಡಿಟ್ಟು ಬಿಡದಿ ಬಳಿ ರೈಲಿಗೆ ತಲೆಕೊಟ್ಟ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮನೆಯಲ್ಲಿ ಪತ್ನಿ ತುಂಬಾ ಕಷ್ಟ ಕೊಡುತ್ತಿದ್ದಾಳೆ. ನನಗೆ ಬದುಕಲುಆಗುತ್ತಿಲ್ಲ. ನನ್ನ ಸಾವಿಗೆ ನನ್ನ ಪತ್ನಿ ಕಾರಣ ಎಂದು ಸೆಲ್ಫಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸದ್ಯ ಬೆಂಗಳೂರು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.