Kantara chapter-1: ಸೆ.26ರಿಂದ ‘ಕಾಂತಾರ ಚಾಪ್ಟರ್ 1’ ಅಡ್ವಾನ್ಸ್ ಬುಕಿಂಗ್ ಆರಂಭ
‘ಹೊಂಬಾಳೆ ಫಿಲ್ಮ್ಸ್’ ನಿರ್ಮಾಣ ಮಾಡಿರುವ ಬಹುನಿರೀಕ್ಷಿತ ‘ಕಾಂತಾರ ಚಾಪ್ಟರ್-1’ ಸಿನಿಮಾ ಇದೇ ಅಕ್ಟೋಬರ್ 2ರಂದು ವಿಶ್ವದಾದ್ಯಂತ ತೆರೆಕಾಣಲು ಸಜ್ಜಾಗಿ ನಿಂತಿದೆ. ಈ ಚಿತ್ರದ ಮೇಲೆ ವಿಶ್ವದಾದ್ಯಂತ ಕುತೂಹಲ ಹೆಚ್ಚಾಗಿದ್ದು, ಇದೇ ಸೆ.26 ರ ಮಧ್ಯಾಹ್ನ 12:29 ರಿಂದ ಕರ್ನಾಟಕದ ಟಿಕೆಟ್ ಅಡ್ವಾನ್ಸ್ ಬುಕ್ಕಿಂಗ್ ಓಪನ್ ಆಗಲಿದೆ.
ಕಾಂತಾರ ಸಿನಿಮಾ ದಾಖಲೆಯನ್ನ ಮಾಡಿತ್ತು. ಇದೀಗ ಕಾಂತಾರ ಚಾಪ್ಟರ್-1 ತೆರೆಗೆ ಬರುತ್ತಿದ್ದು, ಸಿನಿಮಾ ತೆರೆಗೆ ಬರುವ ಮುಂಚೆಯೇ ಕೋಟಿ ಕೋಟಿ ಕಲೆಕ್ಷನ್ ಮಾಡಲಿದೆ ಎಂಬ ನಿರೀಕ್ಷೆಯಿದೆ. ಇನ್ನು ಅಡ್ವಾನ್ಸ್ ಬುಕ್ಕಿಂಗ್‌ನಲ್ಲೂ ದಾಖಲೆಯನ್ನ ಸೃಷ್ಟಿಸುವ ನಿರೀಕ್ಷೆಗಳಿವೆ.
ಕರ್ನಾಟಕದಲ್ಲಿ ಸಿನಿಮಾ ಟಿಕೆಟ್ ದರ 200 ರೂಪಾಯಿ ಮೀರಬಾರದು ಎಂದು ಇತ್ತೀಚೆಗೆ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಅದರ ವಿರುದ್ಧ ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಮತ್ತು ‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆ ಹೈಕೋರ್ಟ್ ಮೆಟ್ಟಿಲೇರಿದ್ದವು. ಆದ್ದರಿಂದ ಚಿತ್ರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಹಾಗಾಗಿ ‘ಕಾಂತಾರ ಚಾಪ್ಟರ್ 1’ ಟಿಕೆಟ್ ಬೆಲೆ ಸಹಜವಾಗಿಯೇ ದುಬಾರಿ ಆಗಲಿದೆ.
ಕರ್ನಾಟಕದಲ್ಲಿ ಸೆಪ್ಟೆಂಬರ್ 26ರ ಮಧ್ಯಾಹ್ನ 12.29ಕ್ಕೆ ‘ಕಾಂತಾರ ಚಾಪ್ಟರ್ 1’ ಸಿನಿಮಾದ ಬುಕ್ಕಿಂಗ್ ಆರಂಭ ಆಗಲಿದೆ. ಸೆಟ್ಟೇರಿದ ದಿನದಿಂದಲೂ ಈ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ವಿಜಯ್ ಕಿರಗಂದೂರು ಅವರು ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ರಿಷಬ್ ಶೆಟ್ಟಿ ಅವರು ನಿರ್ದೇಶನ ಮಾಡುವುದರ ಜೊತೆಗೆ ಮುಖ್ಯ ಪಾತ್ರದಲ್ಲೂ ನಟಿಸಿದ್ದಾರೆ. ಈಗಾಗಲೇ ಟ್ರೇಲರ್ ಧೂಳೆಬ್ಬಿಸಿದೆ.