Bengaluru: ಕೈಯಲ್ಲಿ ದೊಣ್ಣೆ ಹಿಡಿದು ಜನರಲ್ಲಿ ಭಯ ಹುಟ್ಟಿಸಬಹುದೇ ಹೊರತು ಭರವಸೆ ಮೂಡಿಸಲು ಸಾಧ್ಯವಿಲ್ಲ : ಬಿ.ಕೆ ಹರಿಪ್ರಸಾದ್

‘ಕೈಯಲ್ಲಿ ದೊಣ್ಣೆ ಹಿಡಿದು ಜನರಲ್ಲಿ ಭಯ ಹುಟ್ಟಿಸಬಹುದೇ ಹೊರತು ಭರವಸೆ ಮೂಡಿಸಲು ಸಾಧ್ಯವಿಲ್ಲ ಬಿ.ಎಲ್. ಸಂತೋಷ್ ಅವರೇ. ದೇಶದ ಜನರಲ್ಲಿ ಆತ್ಮವಿಸ್ವಾಸ, ಧೈರ್ಯ, ಭರವಸೆ ಮೂಡಿಸಿರುವುದು ಬಾಬಾ ಸಾಹೇಬರು ನೀಡಿರುವ ಸಂವಿಧಾನದಿಂದ ಮಾತ್ರ. ಪಥ ಸಂಚಲನ ಸಾಗುವ ದ್ವೇಷದ ಬೀದಿಯಲ್ಲಿ ಪ್ರೀತಿ ಹುಟ್ಟವುದಾದರೂ ಹೇಗೆ? ದೊಣ್ಣೆ, ಲಾಟಿ, ಬೂಟಿನ ಪಥಸಂಚಲನದಿಂದ ಸಮಾಜದಲ್ಲಿ ಭಯ, ದ್ವೇಷದ ವಾತಾವರಣ ಸೃಷ್ಟಿಸಲಾಗುತ್ತಿದೆ. ಪಥಸಂಚಲನದ ಉದ್ದೇಶವೇ ಭಯದ ವಾತಾವರಣದ ನಿರ್ಮಾಣ ಎನ್ನುವುದು ಸ್ಪಷ್ಟ’ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಆರ್.ಎಸ್.ಎಸ್ “ಪೇಯ್ಡ್” ಸಂಘಟನೆಯಲ್ಲ ಎಂದಾದರೇ ದೇಶ-ವಿದೇಶಿ ಮೂಲದಿಂದಲೂ ಹರಿದು ಬರುತ್ತಿರುವ ಹಣಕ್ಕೆ ಹೊಣೆ ಯಾರು? ಸಮಾಜ ಸೇವೆ ಮಾಡಲು ಆರ್.ಎಸ್.ಎಸ್ ಸರ್ಕಾರಿ ಸಂಸ್ಥೆಯೂ ಅಲ್ಲ, ಸರ್ಕಾರೇತರ ಸಂಸ್ಥೆಯೂ ಅಲ್ಲ, ಕನಿಷ್ಟ ನೊಂದಾವಣಿಯೂ ಆಗಿಲ್ಲ. ಹಾಗಾದರೆ ಇದೊಂದು ಭೂಗತ ಸಂಘಟನೆ ಅಲ್ಲವೇ? ವಿದೇಶದಿಂದ ಆರ್‌ಎಸ್ಎಸ್ ಗೆ ಮಾತ್ರ ಹಣ ಬರಲಿ ಎಂಬ ಕಾರಣಕ್ಕಾಗಿಯೇ ಅಲ್ಲವೇ ಎನ್.ಜಿ.ಓ ಗಳಿಗೆ ವಿದೇಶಿ ಫಂಡ್ ಬರುವುದನ್ನು ನಿಲ್ಲಿಸಿರುವುದು ಎಂದು ಪ್ರಶ್ನಿಸಿದ್ದಾರೆ.

ನೂರು ವರ್ಷದ ಇತಿಹಾಸದಲ್ಲಿ ದೊಣ್ಣೆ ಹಿಡಿದು ಸಾಗಿರುವ ಪಥಸಂಚಲನದಿಂದ ಸಮಾಜಕ್ಕೆ ಆಗಿರುವ ಲಾಭವೇನು? ಹಾದಿ ಬೀದಿಯಲ್ಲಿ ದೊಣ್ಣೆ ಹಿಡಿದು ಶಾಂತಿ-ಸುವ್ಯವಸ್ಥೆಯನ್ನು ಹಾಳು ಮಾಡಿದ್ದೇ ಸಾಧನೆಯೇ? ದೊಣ್ಣೆ ಜನರ ಕೈಗೆ ಸಿಕ್ಕಿ ಬಡಿಸಿಕೊಳ್ಳಬೇಡಿ, ಬೇಗ ಎಚ್ಚೆತ್ತುಕೊಳ್ಳದಿದ್ದರೇ ಸಂಘಕ್ಕೆ ಉಳಿಗಾಲವಿಲ್ಲ ಎಂದು ಆರ್.ಎಸ್.ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Rakesh arundi

Leave a Reply

Your email address will not be published. Required fields are marked *