Shoot out: ನೆಲಮಂಗಲದಲ್ಲಿ ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಗುಂಡಿನ ದಾಳಿ

ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಇಸ್ಲಾಂಪುರದಲ್ಲಿ ನಡೆದಿದೆ.

ಕಣೇಗೌಡನಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ಸಲೀಂ ಅವರ ಮೇಲೆ ಗುಂಡಿನ ದಾಳಿಯಾಗಿದೆ. ಸಲೀಂ ಮನೆ ಬಳಿ ಮಾತನಾಡುತ್ತಿದ್ದ ನಿಂತಿದ್ದ ವೇಳೆ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ಮಾಡಿ ಎಸ್ಕೇಪ್ ಆಗಿದ್ದಾರೆ.

ಈ ದಾಳಿಯಲ್ಲಿ ಸಲೀಂ ಕೈಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Rakesh arundi

Leave a Reply

Your email address will not be published. Required fields are marked *