ಸಿನಿಮೀಯ ಸ್ಟೈಲ್ನಲ್ಲಿ ಗನ್ ತೋರಿಸಿ ಬ್ಯಾಂಕ್ ರಾಬ್ರಿ
ವಿಜಯಪುರ: ಅಪರಿಚಿತ ಮುಸುಕುಧಾರಿಗಳು ಪಟ್ಟಣದ ಎಸ್‌ಬಿಐ ಶಾಕೆಗೆ ಸಿನಿಮೀಯ ಸ್ಟೈಲ್ನಲ್ಲಿ ನುಗ್ಗಿ ಬ್ಯಾಂಕ್ ಮ್ಯಾನೇಜೆರ್ ಸೇರಿದಂತೆ ಸಿಬ್ಬಂದಿಗಳಿಗೆ ಬಂದೂಕು ತೋರಿಸಿ ಅವರನ್ನು ಕಟ್ಟಿಹಾಕಿ ಹಣ ಮತ್ತು ಚಿನ್ನವನ್ನು ದೋಚಿ ಪರರಾಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣದ ಎಸ್‌ಬಿಐ ಬ್ಯಾಂಕ್‌ನಲ್ಲಿ ನಡೆದಿದೆ.
ಮ್ಯಾನೇಜರ್ ಹಾಗೂ ಬ್ಯಾಂಕ್ ಸಿಬ್ಬಂದಿ ಕೆಲಸ ಮುಗಿಸಿ ಮನೆಗೆ ತೆರಳುವ ಸಮಯದಲ್ಲಿ ನುಗ್ಗಿದ ಅಪರಿಚಿತ ಮುಸುಕುಧಾರಿಗಳು ಕೃತ್ಯ ಎಸಗಿದ್ದಾರೆ. ಬ್ಯಾಂಕ್‌ನಲ್ಲಿದ್ದ ಹಣ ಹಾಗೂ ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿದ್ದಾರೆ. ಆದರೆ, ಬ್ಯಾಂಕ್‌ನಲ್ಲಿ ಎಷ್ಟು ನಗದು ಮತ್ತು ಚಿನ್ನಾಭರಣವಿತ್ತು? ಎಷ್ಟು ತೆಗೆದುಕೊಂಡು ಹೋಗಿದ್ದಾರೆ ಎಂಬುದು ತನಿಖೆಯಿಂದಷ್ಟೇ ಖಚಿತವಾಗಬೇಕಿದೆ.
ಈ ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ, ಸ್ಥಳ ಪರಿಶೀಲನೆ ನಡೆಸಿದರು. ಚಡಚಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಮುಸುಕುಧಾರಿಗಳಿಗಾಗಿ ಶೋಧ ನಡೆಸಿದ್ದಾರೆ.