kalaburagi: ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ಆರೋಪ: ಬಿಜೆಪಿ ಮಾಜಿ ಶಾಸಕರ ಮನೆ ಮೇಲೆ ಎಸ್ಐಟಿ ದಾಳಿ
ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವ ಎಸ್ಐಟಿ ಅಧಿಕಾರಿಗಳು ಬಿಜೆಪಿಯ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಮನೆ ಮೇಲೆ ದಾಳಿ ನೆಡೆಸಿದ್ದಾರೆ.
ಎಸ್ಐಟಿ ಎಸ್ಪಿ ಶುಭಾನ್ವಿತಾ ನೇತೃತ್ವದ ತಂಡ ಕಲಬುರಗಿಯ ಗುಬ್ಬಿ ಕಾಲೋನಿಯಲ್ಲಿರುವ ಸುಭಾಷ್ ಗುತ್ತೇದಾರ್ ಹಾಗೂ ಸಿಎ ಮನೆ ಮೇಲು ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಕಲಬುರುಗಿಯ ಮೂರು ಕಡೆ ದಾಳಿ ನಡೆಸಲಾಗಿದೆ. ಪೊಲೀಸ್ ಬಿಗಿ ಭದ್ರತೆಯಲ್ಲಿ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗಿದೆ.
ಆಳಂದ ಮತಕ್ಷೇತ್ರದಲ್ಲಿ 2023ರ ಚುನಾವಣೆಗಿಂತ ಮೊದಲು ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಯತ್ನ ನಡೆದಿತ್ತು ಎಂದು ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಆರೋಪಿಸಿದ್ದರು.