Big Boss kannada: ಕನ್ನಡದ ಬಿಗ್ ಬಾಸ್ ಮನೆಗೆ ಸಂಕಷ್ಟ: ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್

ಕಿರುತರೆಯ ಅತ್ಯಂತ ಜನಪ್ರಿಯ ಶೋ ಕನ್ನಡದ ಬಿಗ್ ಬಾಸ್ 12ನೇ ಆವೃತ್ತಿ ಶುರುವಾದ ಒಂದೇ ವಾರಕ್ಕೆ ಸಂಕಷ್ಟಕ್ಕೆ ಸಿಲುಕಿದೆ.  ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ದಿಢೀರ್ ನೋಟಿಸ್ ನೀಡಿದೆ. ತಾಜ್ಯ ನೀರು ಸಂಸ್ಕರಣ ಘಟಕ ನಿರ್ಮಿಸದ ಹಿನ್ನೆಲೆಯಲ್ಲಿ ಈ ನೋಟಿಸ್ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಬಿಡದಿಯ ಇನ್ನೋವೇಟಿವ್ ಫಿಲ್ಮ್ ಸಿಟಿಯಲ್ಲಿ ಬಿಗ್ ಬಾಸ್ ಮನೆಯನ್ನು ನಿರ್ಮಿಸಲಾಗಿದೆ. ಈ ಸ್ಥಳವು ಹಸಿರು ವಲಯ (ಗ್ರೀನ್ ಬೆಲ್ಟ್) ವ್ಯಾಪ್ತಿಗೆ ಸೇರಿದ್ದು, ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅಧಿಕೃತ ಅನುಮತಿ ಪಡೆದಿಲ್ಲ ಎಂಬ ಆರೋಪಗಳು ಕೇಳಿಬಂದಿವೆ.

ಬಿಗ್ ಬಾಸ್ ಮನೆಯಲ್ಲಿ ಪ್ರತಿದಿನ ಸುಮಾರು 2.5 ಲಕ್ಷ ಲೀಟರ್ ನೀರು ಬಳಕೆ ಮಾಡುತ್ತಿದ್ದು, ತ್ಯಾಜ್ಯ ನೀರು ಸಂಸ್ಕರಣಾ ಘಟಕ ನಿರ್ಮಾಣ ಮಾಡದ ಕಾರಣಕ್ಕೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದ್ದು, ಇದರಿಂದ ಶೋ ಸ್ಥಗಿತಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

Rakesh arundi

Leave a Reply

Your email address will not be published. Required fields are marked *