Bengaluru: ಶಾಲಾ ಕಟ್ಟಡದಿಂದ ಹಾರಿ ವಿದ್ಯಾರ್ಥಿ ಸಾವು
ಬೆಳಗ್ಗೆ ಪ್ರಾರ್ಥನೆ ಮಾಡುವಾಗ ಶಾಲೆಯ ಕಟ್ಟಡದಿಂದ ವಿದ್ಯಾರ್ಥಿ ಬಿದ್ದು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ರಿಚರ್ಡ್ಸ್ ಟೌನ್ನಲ್ಲಿರುವ ಖಾಸಗಿ ಶಾಲೆಯಲ್ಲಿ ನಡೆದಿದೆ. ಮೃತನ್ನು 12ನೇ ತರಗತಿಯ ಆರ್ಯನ್ ಮೊಸೆಸ್ ವ್ಯಾಸ್ ಎಂದು ಹೇಳಲಾಗಿದೆ.
ಬೆಳಗ್ಗೆ 8.20 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಆರ್ಯನ್ ಮೋಸೆಸ್ ವ್ಯಾಸ್ ನನ್ನು ತಕ್ಷಣವೇ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮತ್ತೊಂದು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆರ್ಯನ್ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಇನ್ನು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ಇಲ್ಲಿಯವರೆಗೆ ತಿಳಿದು ಬಂದಿಲ್ಲ. ಈ ಸಂಬಂಧ ಪುಲಿಕೇಶಿ ನಗರದ ಪೊಲೀಸ್ ಠಾಣೆಯಲ್ಲಿ ಯುಡಿಆರ್ ದಾಖಲು ಮಾಡಲಾಗಿದೆ.
ಶಾಲೆಯ ಆಡಳಿತ ಮಂಡಳಿ ವಿದ್ಯಾರ್ಥಿಯ ಮನೆಯವರಿಗೆ ಕಳಿಸಿದ ಪತ್ರದ ಪ್ರಕಾರ, ಶಾಲೆಯಲ್ಲಿ ಮಕ್ಕಳು ಬೆಳಗ್ಗೆ ಪ್ರಾರ್ಥನೆ ಮಾಡುವಾಗ ವಿದ್ಯಾರ್ಥಿ ಶಾಲೆಯ ಎರಡನೇ ಮಹಡಿಯಿಂದ ಹಾರಿದ್ದಾನೆ. ವಿದ್ಯಾರ್ಥಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಹೇಳಿದ್ದಾರೆ ಎಂದು ಈ ಪತ್ರದಲ್ಲಿ ತಿಳಿಸಲಾಗಿದೆ.