Bengaluru: ಮಂತ್ರ ಮಾಂಗಲ್ಯದ ಮೂಲಕ ವೈವಾಹಿಕ ಜೀವನಕ್ಕೆ ಕಾಲಿಟ್ಟ ಗಾಯಕಿ ಸುಹಾನಾ ಸೈಯ್ಯದ್

ಜೀ ಕನ್ನಡ ಚಾನೆಲ್‌ನ ‘ಸರಿಗಮಪ’ ರಿಯಾಲಿಟಿ ಶೋ ಸರಿಗಮಪದ ಮೂಲಕ ಜನಪ್ರಿಯರಾಗಿದ್ದ ಶಿವಮೊಗ್ಗದ ಸಾಗರದ ಗಾಯಕಿ ಸುಹಾನಾ ಸೈಯ್ಯದ್ ಹಾಗೂ ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್ ಮಂತ್ರ ಮಾಂಗಲ್ಯದ ಮೂಲಕ ವಿವಾಹವಾಗಿದ್ದಾರೆ.

ನಗರದ ಖಾಸಗಿ ರೆಸಾರ್ಟ್ ನಲ್ಲಿ ಗುರು ಹಿರಿಯರ ಹಾಗೂ ಆಪ್ತರ ಸಮ್ಮುಖದಲ್ಲಿ ಕುವೆಂಪು ಅವರ ಮಂತ್ರ ಮಾಂಗಲ್ಯದ ಆಶಯದಂತೆ ಸರಳವಾಗಿ ಅಂತರ್ ಧರ್ಮೀಯ ವಿವಾಹವಾದರು. ಇಬ್ಬರ ಧರ್ಮ ಬೇರೆ ಬೇರೆಯಾಗಿದ್ದರೂ ಧೈರ್ಯವಾಗಿ ಪ್ರೀತಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಸುಹಾನಾ ಅವರು ಈ ಹಿಂದೆಯೆ ಸಾಮಾಜಿಕ ಮಾಧ್ಯಮ ಎಕ್ಸ್ ಖಾತೆಯಲ್ಲಿ ನಿತಿನ್ ಜೊತೆಗೆ ಕ್ಲಿಕ್ಕಿಸಿಕೊಂಡಿದ್ದ ಫೋಟೊವನ್ನು ಹಂಚಿಕೊಂಡಿದ್ದರು. ಅದರ ಜೊತೆಗೆ ‘ಪ್ರತಿ ಜೀವಿಯ ಅನ್ವೇಷಣೆ ಪ್ರೇಮಕ್ಕಾಗಿಯೇ. ಪ್ರತಿ ಜೀವಿಯ ನಿರೀಕ್ಷೆ ಪ್ರೇಮಕ್ಕಾಗಿಯೇ, ಪ್ರೇಮಕ್ಕೆ ಕಾರಣ ಇಲ್ಲ. ಈ ಪ್ರೇಮ ಅನಂತ ದೂರದ ಸುಧೀರ್ಘ ಪ್ರಯಾಣ. ಪ್ರೇಮಕ್ಕೆ ಯಾವ ಮಿತಿ ಇಲ್ಲ ಎಂಬುದಕ್ಕೆ ನಾವೇ ಸಾಕ್ಷಿ. ಪ್ರತಿ ಜೀವಿಯ ಅನ್ವೇಷಣೆ ಪ್ರೇಮಕ್ಕಾಗಿಯೇ ಹೃದಯಗಳ ಭಾಷೆ ಎಲ್ಲವನ್ನೂ ಮೀರಿದ್ದು. ಪ್ರತಿ ಸವಾಲು, ಪ್ರತಿ ಸಂಶಯ ಮತ್ತು ಪ್ರತಿ ಭಯದ ಮೌನದಲ್ಲಿಯೂ ನಮ್ಮನ್ನು ಹಿಡಿದಿಟ್ಟಿದ್ದು ಪ್ರೀತಿ. ಇಂದು, ನಮ್ಮ ಗುಟ್ಟನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ ನಿಮ್ಮ ಆಶೀರ್ವಾದವಿರಲಿ’ ಎಂದು ಬರೆದುಕೊಂಡಿದ್ದರು.

Rakesh arundi

Leave a Reply

Your email address will not be published. Required fields are marked *