ಬುರುಡೆ ಪ್ರಕರಣದ ಚಿನ್ನಯ್ಯನಿಗೆ ಜೈಲೇ ಗತಿ
ಮಂಗಳೂರು: ಬುರುಡೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಚಿನ್ನಯ್ಯನ ಜಾಮೀನು ಅರ್ಜಿಯನ್ನು ಬೆಳ್ತಂಗಡಿ ಕೋರ್ಟ್ ವಜಾ ಮಾಡಿದೆ. ಇದರಿಂದ ಆರೋಪಿ ಚಿನ್ನಯ್ಯನಿಗೆ ಜೈಲು ವಾಸವೇ ಗತಿಯಾಗಿದೆ.
ಧರ್ಮಸ್ಥಳದ ಸೌಜನ್ಯ ಕೇಸ್ ತಿರುವು ನೀಡಿದ್ದ ಚಿನ್ನಯ್ಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತುಹಾಕಿರುವುದಾಗಿ ಹೇಳಿ ಬುರುಡೆ ಜೊತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ ಬಳಿಕ ಕೇಸ್‌ನ ಕುತೂಹಲ ಹೆಚ್ಚಾಗಿತ್ತು.
ಸಾಕ್ಷಿ ಪುರಾವೆಗಳು ಸಂರ್ಪೂಣ ಪ್ರಮಾಣದಲ್ಲಿ ಸಿಗದ ಕಾರಣ ಎಸ್‌ಐಟಿ ಮತ್ತು ಜನರ ಮುಂದೆ ಚಿನ್ನಯ್ಯ ಆರೋಪಿಸ್ತಾನದಲ್ಲಿ ನಿಂತಿದ್ದರಿಂದ ಪೊಲೀಸರು ಚಿನ್ನಯನನ್ನು ಬಂದಿಸಿದ್ದರು.
ಆರೋಪಿ ಚಿನ್ನಯ್ಯನ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು ಇದೀಗ ಬೆಳ್ತಂಗಡಿ ತಾಲೂಕು ನ್ಯಾಯಾಲಯದ ಹೆಚ್ಚುವರಿ ವ್ಯಾವಹಾರಿಕ ಮತ್ತು ಪ್ರಥಮ ದರ್ಜೆ ನ್ಯಾಯಾಧೀಶ ವಿಜಯೇಂದ್ರ ಅವರು ಅರ್ಜಿ ವಜಾ ಎಂಬ ಆದೇಶ ಹೊರಡಿಸಿದ್ದಾರೆ.
ಕಾನೂನು ಮತ್ತು ತನಿಖಾ ಹಂತದ ಆಧಾರಿತವಾಗಿ ಎಸ್‌ಐಟಿ ಪರ ವಕೀಲರಿಂದ ಆಕ್ಷೇಪಣೆ ಸಲ್ಲಿಕೆಯ ಹಿನ್ನೆಲೆಯಲ್ಲಿ ಬೇಲ್ ನೀಡಲು ಕೋರ್ಟ್ ನಿರಾಕರಿಸಲಾಗಿದೆ.
ಚಿನ್ನಯ್ಯ ಜೈಲು ಸೇರಿದ ಮೇಲೆ ಅವರ ಪರವಾಗಿ ಜಿಲ್ಲಾ ಕಾನೂನು ಪ್ರಾಧಿಕಾರದ ವಕೀಲರು ಜಾಮೀನು ಅರ್ಜಿಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದರು. ಆದರೆ ಬೇಲ್ ನೀಡದಂತೆ ಎಸ್‌ಐಟಿ ಪರ ವಕೀಲರು ಆಕ್ಷೇಪಣೆ ಸಲ್ಲಿಕೆ ಮಾಡಿದ್ದರು. ಈ ಸಂಬಂಧ ಸೆಪ್ಟೆಂಬರ್ 12ರಂದು ವಾದ ಆಲಿಸಿ, ನ್ಯಾಯಾಧೀಶರು ಇಂದಿಗೆ ಆದೇಶ ಕಾಯ್ದಿರಿಸಿದ್ದರು. ಎರಡೂ ಕಡೆಯ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಾಧೀಶ ವಿಜಯೇಂದ್ರ ಅವರು ಇಂದು ಅರ್ಜಿ ವಜಾ ಮಾಡಿದ್ದಾರೆ.
ಬೆಳ್ತಂಗಡಿ ಎಸ್‌ಐಟಿ ಅಧಿಕಾರಿಗಳು ಬುರುಡೆ ಪ್ರಕರಣಕ್ಕೆ ಸಂಬಂದಿಸಿದಂತೆ ಆ.23ರಂದು ಚಿನ್ನಯ್ಯನನ್ನು ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ, 12 ದಿನಗಳ ಕಾಲ ಕಸ್ಟಡಿಗೆ ಪಡೆದು ತನಿಖೆ ನಡೆಸಿ ಸೆ.3ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಯನ್ನು ಮತ್ತೆ ಮೂರು ದಿನಗಳ ಕಾಲ ಕಸ್ಟಡಿಗೆ ಪಡೆದು ಹೆಚ್ಚಿನ ತನಿಖೆ ನಡೆಸಿ ಸೆ.6ರಂದು ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಸದ್ಯ ಆರೋಪಿ ಚಿನ್ನಯ್ಯ ಶಿವಮೊಗ್ಗ ಜೈಲಿನಲ್ಲಿದ್ದಾನೆ.