Shivamoga: ಶಿವಮೊಗ್ಗ ಜೈಲಿಗೆ ಬಿಸ್ಕೆಟ್ ಪ್ಯಾಕ್ನಲ್ಲಿ ಗಾಂಜಾ, ಸಿಗರೇಟ್ ಸಾಗಾಟ – ಇಬ್ಬರು ಯುವಕರ ಬಂಧನ
ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗೆ ಬಿಸ್ಕೆಟ್ ಪ್ಯಾಕೆಟ್‌ಗಳಲ್ಲಿ ಗಾಂಜಾ ಮತ್ತು ಸಿಗರೇಟ್ ಸಾಗಾಟ ಮಾಡುಲು ಯತ್ನಿಸಿದ ಇಬ್ಬರು ಯುವಕರನ್ನು ಜೈಲು ಸಿಬ್ಬಂದಿ ಬಂಧಿಸಿದ್ದಾರೆ.
ಆರೋಪಿಗಳನ್ನು ಭದ್ರಾವತಿ ನಗರದ ರಾಹಿಲ್ (19) ಹಾಗೂ ತಸೀರುಲ್ಲಾ (19) ಎಂದು ಗುರುತಿಸಲಾಗಿದೆ. ಶನಿವಾರ ಕೈದಿ ಮೊಹಮ್ಮದ್ ಗೌಸ್ ಅಲಿಯಾಸ್ ಜಂಗ್ಲಿ ಎಂಬಾತನ ಸಂದರ್ಶನಕ್ಕೆಂದು ಈ ಇಬ್ಬರು ಯುವಕರು ಮೂರು ಬಿಸ್ಕೆಟ್ ಪ್ಯಾಕೆಟ್‌ಗಳನ್ನು ತಂದಿದ್ದರು. ಅನುಮಾನಗೊಂಡ ಜೈಲು ಸಿಬ್ಬಂದಿ ಬಿಸ್ಕೆಟ್ ಪ್ಯಾಕೆಟ್‌ಗಳನ್ನು ಪರಿಶೀಲಿಸಿದ್ದಾರೆ. ಆಗ ಕಪ್ಪು ಗಮ್ ಟೇಪ್‌ನಲ್ಲಿ ಸುತ್ತಿದ ವಸ್ತುಗಳು ಪತ್ತೆಯಾದವು. ಅದನ್ನು ತೆಗೆದು ನೋಡಿದಾಗ ಗಾಂಜಾ ಮತ್ತು ಸಿಗರೇಟ್ ಪ್ಯಾಕೆಟ್‌ಗಳು ಇರುವುದು ಪತ್ತೆಯಾಗಿದೆ.
ವಸ್ತುಗಳನ್ನು ಜಪ್ತಿ ಮಾಡಿದ ಜೈಲು ಸಿಬ್ಬಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.