Bengaluru: ಯತೀಂದ್ರ ಹೇಳಿದ್ದರಲ್ಲಿ ತಪ್ಪೇನಿದೆ: ಪರಮೇಶ್ವರ್
ಸಿಎಂ ಸಿದ್ಧರಾಮಯ್ಯ ನಂತರ ಸತೀಶ್ ಜಾರಕಿಹೊಳಿ ಮುಂದಾಳತ್ವ ವಹಿಸಿಕೊಳ್ಳಲಿದ್ದಾರೆ ಎಂಬ ಎಂಎಲ್ಸಿ ಯತೀಂದ್ರ ಹೇಳಿಕೆ ಕುರಿತು ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದರಲ್ಲಿ ತಪ್ಪೇನಿದೆ ಎಂದು ಕೇಳುವ ಮೂಲಕ ಸಚಿವ ಸತೀಶ್ ಜಾರಕಿಹೊಳಿಯವರಿಗೆ ಸಚಿವ ಪರಮೇಶ್ವರ್ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿಯವರು ಹಿಂದೆ ಅಹಿಂದ ಚಳುವಳಿಯಲ್ಲಿದ್ದರು. ಅವರಿಗೆ ಆ ಬದ್ಧತೆ ಇದೆ ಎಂದು ಹೇಳಿರಬಹುದು. ಸಿಎಂ ಹುದ್ದೆಯನ್ನು ದೃಷ್ಟಿಯಲ್ಲಿ ಇಟ್ಕೊಂಡು ಅವರು ಹೇಳಿಲ್ಲ. ಸಿಎಂ ರೇಸ್ ನಲ್ಲಿ ಯಾರೇ ಇದ್ದರು ಆಯ್ಕೆ ಪ್ರಕ್ರಿಯೆಯು ಹೈಕಮಾಂಡ್ ಮತ್ತು ಸಿಎಲ್ಪಿ ಸಭೆಯ ಮೂಲಕ ನಡೆಯುತ್ತದೆ. ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಪರಮೇಶ್ವರ್ ಹೇಳಿದ್ದಾರೆ.