Bengaluru: ಧರ್ಮಸ್ಥಳ ಪ್ರಕರಣ: ಎಸ್‌ಐಟಿ ತನಿಖೆ ಮುಂದುವರಿಸಬೇಕೆಂದು ಸಿಎಂಗೆ ಮನವಿ

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಮಹಿಳೆಯರ ಮೇಲಿನ ದೌರ್ಜನ್ಯ, ಕೊಲೆ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ್ದು, ತಾರ್ಕಿಕ ಅಂತ್ಯ ಕಾಣುವವರೆಗೆ ಎಸ್‌ಐಟಿ ತನಿಖೆ ಮುಂದುವರಿಸಬೇಕೆಂದು ಎಂದು ಮಹಿಳಾ ಹೋರಾಟಗಾರರು, ಲೇಖಕಿಯರ ನಿಯೋಗವು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

‘ಕೊಂದವರು ಯಾರು ಆಂದೋಲನ’ದ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಮಹಿಳಾ ನಿಯೋಗ, ಧರ್ಮಸ್ಥಳ ಪ್ರಕರಣಗಳಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಸಿಬಿಐ ಕೋರ್ಟ್ ಹೇಳಿದೆ. ಈ ಕುರಿತು ಕ್ರಮ ಕೈಗೊಳ್ಳಬೇಕು. ಎಸ್‌ಐಟಿ ತನಿಖೆಯನ್ನು ಸಮಗ್ರವಾಗಿ ನಡೆಸಬೇಕು. ತಾರ್ಕಿಕ ಅಂತ್ಯ ಮುಟ್ಟುವವರೆಗೂ ಎಸ್‌ಐಟಿ ಮುಂದುವರೆಸಬೇಕು ಎಂದು ಮನವಿ ಮಾಡಿದ್ದಾರೆ.

ಮಹಿಳೆಯರು ಹಾಗೂ ಸಮಾನ ಮನಸ್ಕರು ಸೇರಿ ಕೊಂದವರು ಯಾರು ಆಂದೋಲನ ರಚಿಸಿದ್ದೇವೆ. ಧರ್ಮಸ್ಥಳ ದೌರ್ಜನ್ಯ ಪ್ರಕರಣಗಳಲ್ಲಿ ನೊಂದ ಮಹಿಳೆಯರ ಪರವಾಗಿ ಆಂದೋಲನ ಧ್ವನಿ ಎತ್ತುತ್ತಿದೆ. ಸರ್ಕಾರ ನೊಂದವರಿಗೆ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು ಎಂದು ಕೋರಿದ್ದಾರೆ.

Rakesh arundi

Leave a Reply

Your email address will not be published. Required fields are marked *